ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ 2023 – Shimoga Zilla Panchayat Recruitment 2023 Apply Online at Shimoga.nic.in

Shimoga Zilla Panchayat Recruitment 2023 : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shimoga Zilla Panchayat Recruitment 2023 : Details of Vacancies

ಹುದ್ದೆ : ಡಾಟಾ ಎಂಟ್ರಿ ಆಪರೇಟರ್, ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ಸಿವಿಲ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಡಾಟಾ ಎಂಟ್ರಿ ಆಪರೇಟರ್3
ತಾಂತ್ರಿಕ ಸಹಾಯಕರು (ತೋಟಗಾರಿಕೆ)4
ತಾಂತ್ರಿಕ ಸಹಾಯಕರು (ಅರಣ್ಯ)4
ತಾಂತ್ರಿಕ ಸಹಾಯಕರು (ಕೃಷಿ)3
ತಾಂತ್ರಿಕ ಸಹಾಯಕರು (ಸಿವಿಲ್)2

ಶೈಕ್ಷಣಿಕ ಅರ್ಹತೆ :
ಡಾಟಾ ಎಂಟ್ರಿ ಆಪರೇಟರ್ – ಪಿಯುಸಿ ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನ, ಕಂಪ್ಯೂಟರ್ ತರಬೇತಿ ಪ್ರಮಾಣಪತ್ರ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ ಹೊರ್ಟಿಕಲ್ಚರ್
ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ ಫಾರೆಸ್ಟ್ರಿ
ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ ಅಗ್ರಿಕಲ್ಚರ್
ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ (ಸಿವಿಲ್)

ವಯೋಮಾನ :
• ಡಾಟಾ ಎಂಟ್ರಿ ಆಪರೇಟರ್ – ಗರಿಷ್ಠ 35 ವರ್ಷ
• ತಾಂತ್ರಿಕ ಸಹಾಯಕರು – ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಆಯ್ಕೆ ಮಾಡಲಾಗುವುದು.

ಅನುಭವ : ತಾಂತ್ರಿಕ ಸಹಾಯಕರು ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ 3 ವರ್ಷ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು ಹಾಗೂ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 20, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 03, 2023

Shimoga Zilla Panchayat Recruitment 2023 : Important Links

NOTIFICATIONCLICK HERE
APPLY ONLINE (DEO)CLICK HERE
APPLY ONLINE (TECHNICAL ASSISTANT)CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment