Shivamogga District Court Recruitment 2021 – Apply Online for 07 Process Server Jobs

Shivamogga District Court Recruitment 2021 : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga District Court Recruitment 2021 : Details of Vacancies

ಹುದ್ದೆ : ಆದೇಶ ಜಾರಿಕಾರರು (ಪ್ರೋಸೆಸ್ ಸರ್ವರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ವಾಹನ ಚಾಲನೆಯ ಲೈಸನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,950 ರಿಂದ ರೂ. 37,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

ಉದ್ಯೋಗ ಮಾಹಿತಿ : ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 23, 2021
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 30, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 31, 2021

Shivamogga District Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment