Shivamogga District Court Recruitment 2021 : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Shivamogga District Court Recruitment 2021 : Details of Vacancies
ಹುದ್ದೆ : ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 17 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶೀಘ್ರಲಿಪಿಗಾರರು | 04 | 27,650-52,650 |
ಬೆರಳಚ್ಚುಗಾರರು | 09 | 21,400-42,000 |
ಬೆರಳಚ್ಚು ನಕಲುಗಾರರು | 04 | 21,400-42,000 |
ಶೈಕ್ಷಣಿಕ ಅರ್ಹತೆ :
• ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ
ಶೀಘ್ರಲಿಪಿಗಾರರು ಹುದ್ದೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿ ಮತ್ತು ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
• ಬೆರಳಚ್ಚುಗಾರರು ಹುದ್ದೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
• ಬೆರಳಚ್ಚು ನಕಲುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಗಳಿಸಿರುವ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ನೇರ ನೇಮಕಾತಿ
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 27, 2021
ಅರ್ಜಿ ಸಲ್ಲಿಸಲು, ಆನ್ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 30, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 31, 2022
Shivamogga District Court Recruitment 2021 : Important Links
(ಶೀಘ್ರಲಿಪಿಗಾರ) ಅಧಿಸೂಚನೆ : Click Here
(ಬೆರಳಚ್ಚುಗಾರ) ಅಧಿಸೂಚನೆ : Click Here
(ಬೆರಳಚ್ಚು ನಕಲುಗಾರ) ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
1 thought on “Shivamogga District Court Recruitment 2021 – Apply Online for 17 Stenographer, Typist, Typist Copyist Jobs”
Good