Shivamogga District Court Recruitment 2022 – Apply Online for 27 Peon Posts

Shivamogga District Court Recruitment 2022 : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga District Court Recruitment 2022 : Details of Vacancies

ಹುದ್ದೆ : ಜವಾನ (ಪಿಯೋನ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
• ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
• ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

ಉದ್ಯೋಗ ಮಾಹಿತಿ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಜವಾನ ಹುದ್ದೆಗಳ ನೇರ ನೇಮಕಾತಿ 2022

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ. 200, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 25, 2022
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 24, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 25, 2022

Shivamogga District Court Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment