ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2023 – Shivamogga District Court Recruitment 2023

Shivamogga District Court Recruitment 2023 : ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga District Court Recruitment 2023 : Details of Vacancies

ಹುದ್ದೆ : ಆದೇಶ ಜಾರಿಕಾರರು, ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ
ಆದೇಶ ಜಾರಿಕಾರರು0519950-37900
ಜವಾನ2817000-28950

ಶೈಕ್ಷಣಿಕ ಅರ್ಹತೆ :
ಆದೇಶ ಜಾರಿಕಾರರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಾಹನ ಚಾಲನಾ ಲೈಸೆನ್ಸ್ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜವಾನ – 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ಉದ್ಯೋಗ ಮಾಹಿತಿ : ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ., ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

ಉದ್ಯೋಗ ಮಾಹಿತಿ : ಧನಲಕ್ಷ್ಮೀ ಬ್ಯಾಂಕ್ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು – ರೂ. 100
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 15, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 16, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 17, 2024

Shivamogga Court Recruitment 2023 : Important Links

NOTIFICATION – PROCESS SERVER CLICK HERE
NOTIFICATION – PEONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment