ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 – Shivamogga Gram Panchayat Recruitment 2026

Shivamogga Gram Panchayat Recruitment 2026

Shivamogga Gram Panchayat Recruitment 2026 : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shivamogga Gram Panchayat Recruitment 2026 : Details of Vacancies

ಹುದ್ದೆ :

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಕರ್ತವ್ಯ ಸ್ಥಳ :

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕು ಗ್ರಾಮ ಪಂಚಾಯತಿಹುದ್ದೆಗಳ ಸಂಖ್ಯೆ
ತೀರ್ಥಹಳ್ಳಿ ಬಾಂಡ್ಯಕುಕ್ಕೆ1
ಸಾಗರ ಕುದರೂರು1
ಭದ್ರಾವತಿವೀರಾಪುರ1
ಹೊಸನಗರಸುಳುಗೋಡು1
ಸೊರಬಭಾರಂಗಿ1
ಹೊಸನಗರತ್ರಿಣಿವೆ1
ತೀರ್ಥಹಳ್ಳಿಹೊಸಹಳ್ಳಿ1
ಶಿಕಾರಿಪುರಮುದ್ದನಹಳ್ಳಿ1
ಶಿವಮೊಗ್ಗಚೋರಡಿ1
ಭದ್ರಾವತಿಕೂಡ್ಲಿಗೆರೆ1
ಸಾಗರಕಲ್ಮನೆ1
ಸೊರಬಹರೀಶಿ1
ಶಿಕಾರಿಪುರಅಂಬಾರಗೊಪ್ಪ1
ಸಾಗರಹೆಗ್ಗೋಡು1

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ಗೃಹರಕ್ಷಕದಳದಿಂದ ಹೋಮ್ ಗಾರ್ಡ್ಸ್ ನೇಮಕಾತಿ 2026

ವಯಸ್ಸಿನ ಮೀತಿ :

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,201.32 ರಂತೆ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಎಸ್‌ಬಿಐ ಪ್ರೊಬೇಷನರಿ ಆಫೀಸರ್ ನೇಮಕಾತಿ 2026

ಆಯ್ಕೆ ವಿಧಾನ :

ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ :

ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು.

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 19, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 08, 2026

Shivamogga Gram Panchayat Recruitment 2026 : Important Links

NOTIFICATIONCLICK HERE
APPLICATION FORMCLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment