Shri Basaveshwar Cooperative Bank Recruitment 2023 – Apply for 35 Junior Assistant, Peon Posts

Shri Basaveshwar Cooperative Bank Recruitment 2023 : ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟ ಇದರಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shri Basaveshwar Cooperative Bank Recruitment 2023 : Details of Vacancies

ಹುದ್ದೆ : ಕಿರಿಯ ಸಹಾಯಕರು, ಸಿಪಾಯಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 35 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಕಿರಿಯ ಸಹಾಯಕರು 2533450-62600
ಸಿಪಾಯಿ1027650-52650

ಶೈಕ್ಷಣಿಕ ಅರ್ಹತೆ :
• ಕಿರಿಯ ಸಹಾಯಕರು – ಅಧಿಕೃತವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಕಂಪ್ಯೂಟರ್ ಕಾರ್ಯನಿರ್ವಹಣೆ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
• ಸಿಪಾಯಿ – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಬರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಬಾಗಲಕೋಟೆ ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ 438 ಹುದ್ದೆಗಳ ನೇರ ನೇಮಕಾತಿ

ಆಯ್ಕೆ ವಿಧಾನ : ಹುದ್ದೆಗೆ ನಿಗದಿಪಡಿಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಬ್ಯಾಂಕಿನ ಪ್ರಧಾನ ಕಛೇರಿಗೆ ಭೇಟಿ ನೀಡಿ ರೂ. 100 + ಜಿ.ಎಸ್.ಟಿ ಶುಲ್ಕವನ್ನು ಭರಣ ಮಾಡಿ ಅರ್ಜಿ ನಮೂನೆ ಪಡೆದುಕೊಳ್ಳಬೇಕು.
ಹಂತ 2 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ.
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಕಿರಿಯ ಸಹಾಯಕ :
ಪ‌.ಜಾತಿ, ಪ.ಪಂ., ಪ್ರ1 ಅಭ್ಯರ್ಥಿಗಳು – ರೂ. 500
ಉಳಿದ ಅಭ್ಯರ್ಥಿಗಳು – ರೂ. 1000
• ಸಿಪಾಯಿ :
ಪ‌.ಜಾತಿ, ಪ.ಪಂ., ಪ್ರ1 ಅಭ್ಯರ್ಥಿಗಳು – ರೂ. 250
ಉಳಿದ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು Shri Basaveshwar Sahakari Bank Nyt., Bagalkot, A/C SS-568 ಹೆಸರಿನಲ್ಲಿ ಬಾಗಲಕೋಟದಲ್ಲಿ ಸಂದಾಯವಾಗುವಂತೆ ಡಿಮಾಂಡ್ ಡ್ರಾಪ್ಟ್ ಪಡೆದು ಅರ್ಜಿಯ ಜೊತೆ ಲಗತ್ತಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ,
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟ ಬಸವೇಶ್ವರ ಬ್ಯಾಂಕ್ ಸರ್ಕಲ್, ಸೆಕ್ಟರ್ ನಂ. 25, ನವನಗರ, ಬಾಗಲಕೋಟೆ – 587 103

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 13, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2023

Shri Basaveshwar Cooperative Bank Recruitment 2023 : Important Links

ಪ್ರಕಟಣೆCLICK HERE
Telegram Join Link Click Here

ವಿ.ಸೂ : ಬ್ಯಾಂಕು ನಿಗದಿಪಡಿಸಿದ ಅರ್ಜಿ ನಮೂನೆಗಳಲ್ಲಿಯೇ ಅರ್ಜಿಗಳನ್ನು ಸಲ್ಲಿಸಬೇಕು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment