ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ 2024 – Shri Shiddheshwar Cooperative Bank Recruitment 2024

Shri Shiddheshwar Cooperative Bank Recruitment 2024 : ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shri Shiddheshwar Cooperative Bank Recruitment 2024 : Details of Vacancies

ಹುದ್ದೆ : ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಹಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್, ಕಿರಿಯ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಅಟೆಂಡರ್/ಜವಾನ/ವಾಚಮೆನ್, ವಾಹನ ಚಾಲಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 48 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಪ್ರಧಾನ ವ್ಯವಸ್ಥಾಪಕರು144250-60600
ವ್ಯವಸ್ಥಾಪಕರು130400-51300
ಹಿರಿಯ ವ್ಯವಸ್ಥಾಪಕರು1128100-50100
ಕಂಪ್ಯೂಟರ್ ಇಂಜಿನಿಯರ್128100-43200
ಕಿರಿಯ ವ್ಯವಸ್ಥಾಪಕರು422800-43200
ಹಿರಿಯ ಸಹಾಯಕರು1321600-40050
ಕಿರಿಯ ಸಹಾಯಕರು1120000-40050
ಅಟೆಂಡರ್/ಜವಾನ/ವಾಚಮೆನ್514550-26700
ವಾಹನ ಚಾಲಕ114550-26700

ಶೈಕ್ಷಣಿಕ ಅರ್ಹತೆ :
ಪ್ರಧಾನ ವ್ಯವಸ್ಥಾಪಕರು – ಮಾನ್ಯತೆ ಪಡೆದ ಸ್ನಾತಕೋತ್ತರ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 5 ವರ್ಷ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.

ವ್ಯವಸ್ಥಾಪಕರು, ಹಿರಿಯ ವ್ಯವಸ್ಥಾಪಕರು, ಕಿರಿಯ ವ್ಯವಸ್ಥಾಪಕರು – ಪದವಿ ಜೊತೆಗೆ ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 3 ವರ್ಷ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.

ಕಂಪ್ಯೂಟರ್ ಇಂಜಿನಿಯರ್ – ಬಿ.ಇ (ಕಂಪ್ಯೂಟರ್ ಸೈನ್ಸ್/ ಇ ಮತ್ತು ಸಿ)/ ಎಂ.ಸಿ.ಎ.

ಹಿರಿಯ, ಕಿರಿಯ ಸಹಾಯಕರು – ಪದವಿ ಜೊತೆಗೆ ಕಂಪ್ಯೂಟರ್ ಪರಿಜ್ಞಾನ ಹೊಂದಿರಬೇಕು.

ಅಟೆಂಡರ್/ಜವಾನ/ವಾಚಮೆನ್ – ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಾಹನ ಚಾಲಕ – ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು ಜೊತೆಗೆ ವಾಹನ ಚಾಲನೆಯ ಚಾಲ್ತಿ (LMV) ಲೈಸೆನ್ಸ್ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಅಟೆಂಡರ್ ಹಾಗೂ ವಾಹನ ಚಾಲಕ ಹುದ್ದೆ ಹೊರತುಪಡಿಸಿ ಉಳಿದ ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಟೆಂಡರ್ ಹಾಗೂ ವಾಹನ ಚಾಲಕ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ 2024 – Shri Shiddheshwar Cooperative Bank Recruitment 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ, ಇತರೆ ಹಿಂ. ವರ್ಗ – ರೂ. 1200
• ಪ.ಜಾತಿ, ಪ. ಪಂ, ಪ್ರ1, ಮಾಜಿ ಸೈನಿಕ – ರೂ. 600

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 04, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31, 2024

Shri Shiddheshwar Cooperative Bank Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment