ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2024 – SIDBI Officer Recruitment 2024

SIDBI Officer Recruitment 2024 : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SIDBI Officer Recruitment 2024 : Details of Vacancies

ಹುದ್ದೆ : ಆಫೀಸರ್ಸ್ ಗ್ರೇಡ್ ‘ಎ’ ಹಾಗೂ ಗ್ರೇಡ್ ‘ಬಿ’

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 72 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಆಫೀಸರ್ಸ್ ಗ್ರೇಡ್ ‘ಎ’50
ಆಫೀಸರ್ಸ್ ಗ್ರೇಡ್ ‘ಬಿ’22

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ CS/ CMA/ ICWA/ CFA/ CA/ MBA/ PGDM ಪದವಿ ಹಾಗೂ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಈಶಾನ್ಯ ಗಡಿ ರೈಲ್ವೆಯಲ್ಲಿ ನೇಮಕಾತಿ 2024

ವಯೋಮಾನ : ದಿನಾಂಕ 08/11/2024ಕ್ಕೆ
• ಆಫೀಸರ್ಸ್ ಗ್ರೇಡ್ ‘ಎ’ – ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ
• ಆಫೀಸರ್ಸ್ ಗ್ರೇಡ್ ‘ಬಿ’ – ಕನಿಷ್ಠ 25 ವರ್ಷ, ಗರಿಷ್ಠ 33 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆವೇತನ
ಆಫೀಸರ್ಸ್ ಗ್ರೇಡ್ ‘ಎ’44500-100000
ಆಫೀಸರ್ಸ್ ಗ್ರೇಡ್ ‘ಬಿ’55200-115000

ಆಯ್ಕೆ ವಿಧಾನ : ಫೇಸ್-1, ಫೇಸ್-2 ಆನ್‌ಲೈನ್‌ ಪರೀಕ್ಷೆ ಹಾಗೂ ಫೇಸ್-3 (ಸಂದರ್ಶನ) ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಐಡಿಬಿಐ ಬ್ಯಾಂಕ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಎಸ್ಐಡಿಬಿಐ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಎಸ್ಐಡಿಬಿಐ ಇದರ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 1,100

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 08, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 02, 2024
(ತಾತ್ಕಾಲಿಕ) ಫೇಸ್-1 ಆನ್‌ಲೈನ್‌ ಪರೀಕ್ಷೆ ದಿನಾಂಕ : ಡಿಸೆಂಬರ್ 22, 2024
(ತಾತ್ಕಾಲಿಕ) ಫೇಸ್-2 ಆನ್‌ಲೈನ್‌ ಪರೀಕ್ಷೆ ದಿನಾಂಕ : ಜನವರಿ 19, 2025
(ತಾತ್ಕಾಲಿಕ) ಸಂದರ್ಶನ ದಿನಾಂಕ : ಫೆಬ್ರವರಿ, 2025

SIDBI Officer Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment