ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನೇಮಕಾತಿ 2023 – Silk Growers and Farmers Service Cooperative Society Recruitment 2023

Silk Growers and Farmers Service Cooperative Society Recruitment 2023 : ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Silk Growers and Farmers Service Cooperative Society Recruitment 2023 : Details of Vacancies

ಹುದ್ದೆ : ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವರ್ಗಹುದ್ದೆಗಳ ಸಂಖ್ಯೆ
ಸಾಮಾನ್ಯ ವರ್ಗ2
ಪ್ರವರ್ಗ-2ಎ1
ಪ್ರವರ್ಗ-3ಎ1
ಪ್ರವರ್ಗ-3ಬಿ1

ಶೈಕ್ಷಣಿಕ ಅರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು ಹಾಗೂ ಭಾಷಾ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪಪೂರೈಸಿರಬೇಕು
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ಪವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಬಸ್ ನಿಲ್ದಾಣ ಪಕ್ಕ, ಸರ್ಜಾಪುರ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ 562125

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 1000 ಶುಲ್ಕ ಪಾವತಿಸಿ ಅರ್ಜಿ ನಮೂನೆ ಪಡೆದುಕೊಳ್ಳಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 27, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 28, 2023

Silk Growers and Farmers Service Cooperative Society Recruitment 2023 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment