
Sirsi Urban Bank Recruitment 2026 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಶಿರಸಿ ಇದರಲ್ಲಿ ಖಾಲಿಯಿರುವ ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್, ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Sirsi Urban Bank Recruitment 2026 : Details of Vacancies
ಹುದ್ದೆ :
ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್, ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಶಿರಸಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 40 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್ | 30 |
| ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ | 10 |
ಶೈಕ್ಷಣಿಕ ಅರ್ಹತೆ :
ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್ –
- ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ/ ಬಿ.ಬಿ.ಎ/ ಬಿ.ಬಿ.ಎಂ/ ಬಿ.ಇ/ ಬಿ.ಎಸ್ಸಿ/ಬಿ.ಎ ಪದವಿಯನ್ನು ಹೊಂದಿರಬೇಕು (ಪದವಿಯ ಎಲ್ಲಾ ವರ್ಷದ ಸರಾಸರಿ ಶೇಕಡಾ 50 ಮತ್ತು 50 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರಬೇಕು).
- ಬಿ.ಎಸ್ಸಿ – ಗಣಿತ ಅಥವಾ ಸಂಖ್ಯಾಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಒಂದು ಐಚ್ಚಿಕ ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.
- ಬಿ.ಎ – ಗಣಿತ, ಸಂಖ್ಯಾಶಾಸ್ತ್ರ ಅಥವಾ ಅರ್ಥಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಒಂದು ಐಚ್ಚಿಕ ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.
ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ –
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
- ಕನಿಷ್ಠ 18 ವರ್ಷ
- ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
| ಹುದ್ದೆ | ವೇತನ |
| ಫ್ರಂಟ್ ಡೆಸ್ಕ ಅಸೋಸಿಯೇಟ್/ ಕಸ್ಟಮರ್ ರಿಲೇಷನಷಿಪ್ ಅಸೋಸಿಯೇಟ್ | ರೂ. 34,100 – ರೂ. 1,07,500 |
| ಸೇವಕ/ ಸಿಪಾಯಿ/ ಕಾವಲುಗಾರ/ ಭದ್ರತಾ ರಕ್ಷಕ | ರೂ. 27,000 – ರೂ. 83,700 |
ಆಯ್ಕೆ ವಿಧಾನ :
ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಪಡೆಯುವ ಅಂಕಗಳನ್ನು ಶೇಕಡಾ 85ಕ್ಕೆ ನಿಗದಿಪಡಿಸಿ, ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ, ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಕೇಂದ್ರ ಕಛೇರಿ, ರಾಯರಪೇಟೆ, ಶಿರಸಿ – 581 401 (ಉ.ಕ)
ನಿಗದಿತ ಅರ್ಜಿ ಶುಲ್ಕದ ವಿವರ :
ರೂ. 1000 ಅರ್ಜಿ ಶುಲ್ಕವನ್ನು “Chief Executive Officer, The Sirsi Urban Sahakari
Bank Ltd., Sirsi” ಹೆಸರಿಗೆ ಡಿಮಾಂಡ್ ಡ್ರಾಪ್ಟ್ ಮೂಲಕ ಪಾವತಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 07, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 28, 2026
Sirsi Urban Cooperative Bank Recruitment 2026 : Important Links
| NOTIFICATION | CLICK HERE |
| APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.