
SNS Bank Vijayapur Recruitment 2026 : ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಕಿರಿಯ ಸಹಾಯಕರು ಹಾಗೂ ಸಿಪಾಯಿ/ಕಾವಲುಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SNS Bank Vijayapur Recruitment 2026 : Details of Vacancies
ಹುದ್ದೆ :
ಕಿರಿಯ ಸಹಾಯಕರು, ಸಿಪಾಯಿ/ಕಾವಲುಗಾರ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ವಿಜಯಪುರ ಜಿಲ್ಲೆ , ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 18 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕಿರಿಯ ಸಹಾಯಕರು | 12 |
| ಸಿಪಾಯಿ/ಕಾವಲುಗಾರ | 6 |
ಶೈಕ್ಷಣಿಕ ಅರ್ಹತೆ :
ಕಿರಿಯ ಸಹಾಯಕರು –
- ಯಾವುದೇ ಪದವಿಯಲ್ಲಿ ಸರಾಸರಿ ಕನಿಷ್ಠ 60% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
- ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನನಲ್ಲಿ ಜ್ಞಾನ ಹೊಂದಿರಬೇಕು.
ಸಿಪಾಯಿ/ ಕಾವಲುಗಾರ –
- ಎಸ್‌ಎಸ್.ಎಲ್.ಸಿ ಯಲ್ಲಿ ಸರಾಸರಿ ಕನಿಷ್ಠ 50% ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
- ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ಉದ್ಯೋಗ ಮಾಹಿತಿ : ಕ್ಲರ್ಕ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2026
ವಯೋಮಾನ (ದಿನಾಂಕ 28/09/2026ಕ್ಕೆ) :
- ಕನಿಷ್ಠ 18 ವರ್ಷ ಪೂರೈಸಿರಬೇಕು
- ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
- ಪ್ರವರ್ಗ 2ಎ, 2ಬಿ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
- ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- (ಗರಿಷ್ಠ ವಯೋಮಿತಿಯಲ್ಲಿ ಹೆಚ್ಚುವರಿ ಐದು ವರ್ಷಗಳ ಸಡಿಲಿಕೆ ನೀಡಲಾಗಿದೆ)
ವೇತನ :
| ಹುದ್ದೆ | ವೇತನ |
| ಕಿರಿಯ ಸಹಾಯಕರು | ರೂ. 44,425 – ರೂ. 83,700 |
| ಸಿಪಾಯಿ/ಕಾವಲುಗಾರ | ರೂ. 27,000 – ರೂ. 46,675 |
ಆಯ್ಕೆ ವಿಧಾನ :
- ಕಿರಿಯ ಸಹಾಯಕರು – ಲಿಖಿತ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ 15 ಅಂಕಗಳನ್ನು ನಿಗದಿಪಡಿಸಲಾಗಿದೆ.
- ಸಿಪಾಯಿ/ ಕಾವಲುಗಾರ – ಈ ಹುದ್ದೆಗಳಿಗಾಗಿ ನಿರ್ದಿಷ್ಟ ಪಡಿಸಲಾದ ಅರ್ಹತೆಯುಳ್ಳ ಲಿಖಿತ ಪರೀಕ್ಷೆಯಲ್ಲಿ ಪಡೆದುಕೊಂಡ ಪ್ರತಿಶತ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಕಿರಿಯ ಸಹಾಯಕರು ಹುದ್ದೆಗೆ ಲಿಖಿತ ಪರೀಕ್ಷಾ ಮಾದರಿ –

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಕಿರಿಯ ಸಹಾಯಕರು –
- ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 1,200
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು – ರೂ. 600
ಸಿಪಾಯಿ/ ಕಾವಲುಗಾರ –
- ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 600
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು – ರೂ. 400
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 08, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 28, 2026
Sarakari Naukarara Sahakari Bank Vijayapur Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.