South Central Railway Recruitment 2023 – Apply Online for 4103 Apprentice Posts

South Central Railway Recruitment 2023 : ಸೌತ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

South Central Railway Recruitment 2023 : Details of Vacancies

ಹುದ್ದೆ : ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು. (ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ)

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4103 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಟ್ರೇಡ್ಹುದ್ದೆಗಳ ಸಂಖ್ಯೆ
ಎಸಿ ಮೆಕ್ಯಾನಿಕ್250
ಕಾರ್ಪೆಂಟರ್18
ಡಿಸೇಲ್ ಮೆಕ್ಯಾನಿಕ್531
ಇಲೆಕ್ಟ್ರಿಷಿಯನ್1019
ಇಲೆಕ್ಟ್ರಾನಿಕ್ ಮೆಕ್ಯಾನಿಕ್92
ಫಿಟ್ಟರ್1460
ಮಶಿನಿಸ್ಟ್71
ಮೆಕ್ಯಾನಿಕ್ ಮಷಿನ್ ಟೂಲ್ ಮೈಂಟೆನನ್ಸ್5
ಮಿಲ್ ರೈಟ್ ಮೈಂಟೆನನ್ಸ್24
ಪೇಂಟರ್80
ವೆಲ್ಡರ್553

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಾನ : ದಿನಾಂಕ 30 ಡಿಸೆಂಬರ್ 2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಉದ್ಯೋಗ ಮಾಹಿತಿ : ಕರ್ನಾಟಕ ಬ್ಯಾಂಕ್ ನೇಮಕಾತಿ 2023

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ : ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಎಸಿ ಮೆಕ್ಯಾನಿಕ್, ಕಾರ್ಪೆಂಟರ್, ಡಿಸೇಲ್ ಮೆಕ್ಯಾನಿಕ್, ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮಶಿನಿಸ್ಟ್, ಮೆಕ್ಯಾನಿಕ್ ಮಷಿನ್ ಟೂಲ್ ಮೈಂಟೆನನ್ಸ್, ಪೇಂಟರ್, ವೆಲ್ಡರ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 30, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 29, 2023

South Central Railway Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment