South East Central Railway Recruitment 2023 – Apply Online for 548 Apprentice Posts

South East Central Railway Recruitment 2023 : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

South East Central Railway Recruitment 2023 : Details of Vacancies

ಹುದ್ದೆ : ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 548 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಾನ : ದಿನಾಂಕ 01 ಜುಲೈ 2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಉದ್ಯೋಗ ಮಾಹಿತಿ : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ : ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಕಾರ್ಪೆಂಟರ್,ಡ್ರಾಪ್ಟ್ ಮನ್ (ಸಿವಿಲ್), ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ (ಮೆಕ್ಯಾನಿಕ್), ಫಿಟ್ಟರ್, ಮಶಿನಿಸ್ಟ್, ಪ್ಲಂಬರ್, ಮೆಕ್ಯಾನಿಕ್ (ರೆಪ್ರಿಜಿರೇಶನ್ & ಏರ್ ಕಂಡೀಷನಿಂಗ್), ಸ್ಟೀಲ್ ಮೆಟಲ್ ವರ್ಕ್, ಸ್ಟೇನೋ (ಇಂಗ್ಲೀಷ್), ಸ್ಟೇನೋ (ಹಿಂದಿ), ಟರ್ನರ್, ವೆಲ್ಡರ್, ವಯರ್ ಮ್ಯಾನ್, ಗ್ಯಾಸ್ ಕಟ್ಟರ್, ಡಿಜಿಟಲ್ ಫೋಟೋಗ್ರಾಫರ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 03, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 03, 2023

South East Central Railway Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment