
SSB Constable Recruitment 2026 : ಸಶಸ್ತ್ರ ಸೀಮಾ ಬಲದಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSB Constable Recruitment 2026 : Details of Vacancies
ಹುದ್ದೆ :
ಕಾನ್ಸ್‌ಟೇಬಲ್ (ವೆಟರ್ನರಿ, ಡ್ರೈವರ್, ಗಾರ್ಡನರ್, ವಾಟರ್ ಕ್ಯಾರಿಯರ್, ಕೊಬ್ಲೇರ್, ಟೇಲರ್, ವಾಶರ್ ಮ್ಯಾನ್, ಬಾರ್ಬರ್, ವೇಟರ್, ಕಾರ್ಪೆಂಟರ್, ನರ್ಸಿಂಗ್ ಆರ್ಡರ್ಲಿ)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 827 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ವೆಟರ್ನರಿ | 34 |
| ಡ್ರೈವರ್ | 553 |
| ಗಾರ್ಡನರ್ | 41 |
| ವಾಟರ್ ಕ್ಯಾರಿಯರ್ | 5 |
| ಕೊಬ್ಲೇರ್ | 25 |
| ಟೇಲರ್ | 41 |
| ವಾಶರ್ ಮ್ಯಾನ್ | 74 |
| ಬಾರ್ಬರ್ | 43 |
| ವೇಟರ್ | 3 |
| ಕಾರ್ಪೆಂಟರ್ | 7 |
| ನರ್ಸಿಂಗ್ ಆರ್ಡರ್ಲಿ | 1 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಆಯಾ ಟ್ರೇಡ್ ನಲ್ಲಿ ಕೆಲಸದ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
• ಕಾನ್ಸ್‌ಟೇಬಲ್ (ವೆಟರ್ನರಿ, ಡ್ರೈವರ್, ನರ್ಸಿಂಗ್ ಆರ್ಡರ್ಲಿ) – ಗರಿಷ್ಠ 27 ವರ್ಷ
• ಕಾನ್ಸ್‌ಟೇಬಲ್ (ಗಾರ್ಡನರ್, ವಾಟರ್ ಕ್ಯಾರಿಯರ್, ಕೊಬ್ಲೇರ್, ಟೇಲರ್, ವಾಶರ್ ಮ್ಯಾನ್, ಬಾರ್ಬರ್, ವೇಟರ್) – ಗರಿಷ್ಠ 23 ವರ್ಷ
• ಕಾನ್ಸ್‌ಟೇಬಲ್ (ಕಾರ್ಪೆಂಟರ್) – ಗರಿಷ್ಠ 25 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
• ಫಿಸಿಕಲ್ ಎಫಿಷಿಯೆನ್ಸಿ ಟೆಸ್ಟ್ (PET)
• ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST)
• ಲಿಖಿತ ಪರೀಕ್ಷೆ (CBT)
• ಸ್ಕಿಲ್ ಟೆಸ್ಟ್
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಯುಆರ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 100
• ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಶೀಘ್ರದಲ್ಲೇ
SSB Constable Recruitment 2026 : Important Links
| SHORT NOTIFICATION | CLICK HERE |
| APPLY ONLINE | CLICK HERE ಶೀಘ್ರದಲ್ಲೇ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.