ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2026 – SSC CHSL Recruitment 2026

SSC CHSL Recruitment 2026

SSC CHSL Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC CHSL Recruitment 2026 : Details of Vacancies

ಹುದ್ದೆ :

ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 2536 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

  • ಡಾಟಾ ಎಂಟ್ರಿ ಆಪರೇಟರ್ (DEO)/ DEO ಗ್ರೇಡ್ ‘ಎ’ ಇನ್ ಮಿನಿಸ್ಟ್ರಿ ಆಫ್ ಕಸ್ಯೂಮರ್ ಅಫೆರ್ಸ್, ಫುಡ್ & ಪಬ್ಲಿಕ್ ಡಿಸ್ಟ್ರಿಬ್ಯೂಷನ್, ಸ್ಟಾಫ್ ಸೆಲೆಕ್ಷನ್ ಕಮಿಷನ್ & ಮಿನಿಸ್ಟ್ರಿ ಆಫ್ ಕಲ್ಚರ್ – 12ನೇ ತರಗತಿಯನ್ನು ವಿಜ್ಞಾನ ವಿಭಾಗದಲ್ಲಿ ಗಣಿತವನ್ನು ಒಂದು ವಿಷಯವಾಗಿ ತೆಗೆದುಕೊಂಡು ಉತ್ತೀರ್ಣರಾಗಿರಬೇಕು.
  • ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA) & ಡಾಟಾ ಎಂಟ್ರಿ ಆಪರೇಟರ್ (DEO)/ DEO ಗ್ರೇಡ್ ‘ಎ’ (ಉಳಿದ ಇಲಾಖೆ DEO ಹುದ್ದೆಗಳಿಗೆ) – 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2026

ವಯೋಮಿತಿ (ದಿನಾಂಕ 01-08-2026ಕ್ಕೆ):

  • ಕನಿಷ್ಠ 18 ವರ್ಷ ಪೂರೈಸಿರಬೇಕು
  • ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
  • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
  • ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
  • ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ವೇತನ :

ಹುದ್ದೆವೇತನ
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA)ರೂ. 19,900 – ರೂ. 63,200
ಡಾಟಾ ಎಂಟ್ರಿ ಆಪರೇಟರ್ (DEO)ರೂ. 29,200 – ರೂ. 92,300

ಆಯ್ಕೆ ವಿಧಾನ :

  • ಕಂಪ್ಯೂಟರ್ ಬೇಸ್ಡ್ ಎಕ್ಸಾಂಮಿನೇಷನ್ (Tier-1)
  • ಕಂಪ್ಯೂಟರ್ ಬೇಸ್ಡ್ ಎಕ್ಸಾಂಮಿನೇಷನ್ (Tier-2)
  • ಕಂಪ್ಯೂಟರ್ ನಾಲೆಡ್ಜ್ ಟೆಸ್ಟ್
  • ಸ್ಕಿಲ್ ಟೆಸ್ಟ್ (DEO ಹುದ್ದೆಗೆ)/ ಟೈಪಿಂಗ್ ಟೆಸ್ಟ್ (LDC/JSA ಹುದ್ದೆಗೆ)
  • ದಾಖಲೆಗಳ ಪರಿಶೀಲನೆ

ಉದ್ಯೋಗ ಮಾಹಿತಿ : ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ 2026

ಪರೀಕ್ಷಾ ಕೇಂದ್ರಗಳು :

ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

  • ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
  • ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 07, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 07, 2026
  • ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 08, 2026

SSC CHSL Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment