SSC GD Constable Recruitment 2021 | 25271 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

SSC GD Constable Recruitment 2021 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC GD Constable Recruitment 2021 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ) ಪುರುಷ ಹಾಗೂ ಮಹಿಳೆ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 25271 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಾನ್ಸ್‌ಟೇಬಲ್‌ (ಜಿಡಿ) ಪುರುಷ22424
ಕಾನ್ಸ್‌ಟೇಬಲ್‌ (ಜಿಡಿ) ಮಹಿಳೆ2847

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 17, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 31, 2021

SSC GD Constable Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.