SSC GD Constable Recruitment 2022 – Apply Online for 24369 Posts

SSC GD Constable Recruitment 2022 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್‌ಟೇಬಲ್‌ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC GD Constable Recruitment 2022 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ) ಪುರುಷ ಹಾಗೂ ಮಹಿಳೆ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 24369 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ (ಪಡೆಗಳು)ಹುದ್ದೆಗಳ ಸಂಖ್ಯೆ
ಗಡಿ ಭದ್ರತಾ ಪಡೆ10497
ಕೇಂದ್ರ ಕೈಗಾರಿಕಾ ಭದ್ರತಾ ಪಡೆ100
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ8911
ಸಶಸ್ತ್ರ ಸೀಮಾ ಬಲ1284
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌1613
ಅಸ್ಸಾಂ ರೈಫಲ್ಸ್‌1697
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್‌103

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ವಯೋಮಿತಿ : ದಿನಾಂಕ 01-01-2023ಕ್ಕೆ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 23 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದಲ್ಲಿ ನೇಮಕಾತಿ 2022

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 30, 2022
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 01, 2022
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಜನವರಿ, 2023

SSC GD Constable Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment