ಸ್ಟಾಫ್ ಸೆಲೆಕ್ಷನ್ ಕಮಿಷನ್ ಜೂನಿಯರ್ ಇಂಜಿನಿಯರ್ ನೇಮಕಾತಿ 2026 – SSC Junior Engineer Recruitment 2026

SSC Junior Engineer Recruitment 2026

SSC Junior Engineer Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಜೂನಿಯರ್ ಇಂಜಿನಿಯರ್ (ಜೆಇ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Junior Engineer Recruitment 2026 : Details of Vacancies

ಹುದ್ದೆ :

ಜೂನಿಯರ್ ಇಂಜಿನಿಯರ್ (ಸಿವಿಲ್), ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್), ಜೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್), ಜೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್ & ಮೆಕ್ಯಾನಿಕಲ್), ಜೂನಿಯರ್ ಇಂಜಿನಿಯರ್ (ಟೆಲಿಕಾಂ), ಸೈಂಟಿಫಿಕ್ ಅಸಿಸ್ಟಂಟ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 1748 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಗ್ರಿ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಗ್ರಿ ಇನ್ ಇಲೆಕ್ಟ್ರಿಕಲ್ ಅಥವಾ ಆಟೋಮೊಬೈಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಇಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಡಿಗ್ರಿ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಬ್ಯಾಚುಲರ್ ಡಿಗ್ರಿ ಇನ್ ಸೈನ್ಸ್ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2026

ವಯೋಮಿತಿ (ದಿನಾಂಕ 01/08/2026ಕ್ಕೆ) :

  • ಸೆಂಟ್ರಲ್ ಪಬ್ಲಿಕ್ ವರ್ಕ್ಸ ಡಿಪಾರ್ಟ್ಮೆಂಟ್, ಡೈರೆಕ್ಟರ್ ಜನರಲ್ ಆಫ್ ಲೈಟ್ ಹೌಸಿಸ್ & ಲೈಟ್ ಶಿಪ್ಸ್, ಮಿನಿಸ್ಟ್ರಿ ಆಫ್ ಪೋರ್ಟ್ಸ್, ಶಿಪ್ಪಿಂಗ್ & ವಾಟರ್ ವೇಸ್ ಇಲಾಖೆ ಹುದ್ದೆಗಳಿಗೆ – ಗರಿಷ್ಠ 32 ವರ್ಷ
  • ಉಳಿದ ಇಲಾಖೆ ಹುದ್ದೆಗಳಿಗೆ – ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :

  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
  • ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
  • ಪಿಡಬ್ಲ್ಯೂಬಿಡಿ (ಅನ್ ರಿಸರ್ವಡ್/ ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ
  • ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ ಸಡಿಲಿಕೆ
  • ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ ಸಡಿಲಿಕೆ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ ರೂ. 1,12,400 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

  • ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1)
  • ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-2)
  • ದಾಖಲೆಗಳ ಪರಿಶೀಲನೆ

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ಪರೀಕ್ಷಾ ಕೇಂದ್ರಗಳು :

ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ

  • ರೂ. 100 ಶುಲ್ಕವನ್ನು ಪಾವತಿಸಬೇಕು.
  • ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 02, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 22, 2026
  • ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 23, 2026
  • ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1) : ಅಕ್ಟೋಬರ್/ನವೆಂಬರ್, 2026
  • ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-2) : ಡಿಸೆಂಬರ್, 2026

SSC Junior Engineer Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment