
SSC MTS Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC MTS Recruitment 2025 : Details of Vacancies
ಹುದ್ದೆ : ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್), ಹವಾಲ್ದಾರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1075 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) | Vacancies Being Collected |
ಹವಾಲ್ದಾರ್ | 1075 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ 2025
ವಯೋಮಿತಿ : ದಿನಾಂಕ 01-08-2025ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಂಟಿಎಸ್ – ಗರಿಷ್ಠ 25 ವರ್ಷ
• ಹವಾಲ್ದಾರ್ ಇನ್ ಸಿಬಿಐಸಿ & ಸಿಬಿಎನ್, ಕಂದಾಯ ಇಲಾಖೆ ಮತ್ತು ಕೆಲವು ಎಂಟಿಎಸ್ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ :
• ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
• ಹವಾಲ್ದಾರ್ – ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ (PET), ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಎಸ್‌ಬಿಐ ಪ್ರೊಬೇಷನರಿ ಆಫೀಸರ್ ನೇಮಕಾತಿ 2025
ಪರೀಕ್ಷಾ ಕೇಂದ್ರಗಳು : ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಹಿಂದಿ, ಇಂಗ್ಲಿಷ್ ಸೇರಿದಂತೆ ಕನ್ನಡದಲ್ಲಿಯೂ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳು – ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ರೂ. 100 ಶುಲ್ಕವನ್ನು ಪಾವತಿಸಬೇಕು.
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 26, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 24, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 25, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಸೆಪ್ಟೆಂಬರ್ 20 – ಅಕ್ಟೋಬರ್ 24, 2025
SSC MTS Recruitment 2025 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.