SSC Recruitment 2024 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ Phase-XII ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SSC Recruitment 2024 : Details of Vacancies
ಹುದ್ದೆ : Phase-XII (ಲೈಬ್ರರಿ ಅಟೆಂಡೆಂಟ್, ಅಕೌಂಟೆಂಟ್, ಲ್ಯಾಬೋರೇಟರಿ ಅಟೆಂಡೆಂಟ್, ಜೂನಿಯರ್ ಇಂಜಿನಿಯರ್, ಡಾಟಾ ಎಂಟ್ರಿ ಆಪರೇಟರ್, ಟೆಕ್ನಿಕಲ್ ಅಸಿಸ್ಟಂಟ್, ಸ್ಟಾಫ್ ಕಾರ್ ಡ್ರೈವರ್, ಕೋರ್ಟ್ ಕ್ಲರ್ಕ್, ಲೊವರ್ ಡಿವಿಷನ್ ಕ್ಲರ್ಕ್, ಸ್ಟೋರ್ ಕೀಪರ್, ಸೆಕ್ಯೂರಿಟಿ ಸೂಪರ್ವೈಸರ್, ಕುಕ್, ಫಾರ್ಮಾಸಿಸ್ಟ್, ಯುಡಿಸಿ, ನರ್ಸಿಂಗ್ ಆಫೀಸರ್ ಹಾಗೂ ವಿವಿಧ ಹುದ್ದೆಗಳು)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2049 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೆಇಎ ಯಿಂದ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 2024
ವಯೋಮಿತಿ : ದಿನಾಂಕ 01-01-2024ಕ್ಕೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 42 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆ ನೇಮಕಾತಿ 2024
ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಮಹಿಳಾ, ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 26, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 18, 2024
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 19, 2024
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಮೇ, 6-8, 2024 (ತಾತ್ಕಾಲಿಕ)
SSC Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.