ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2025 – SSC Recruitment 2025

SSC Recruitment 2025

SSC Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ Phase-XIII ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Recruitment 2025 : Details of Vacancies

ಹುದ್ದೆ : Phase-XIII (ಜ್ಯೂನಿಯರ್ ಇಂಜಿನಿಯರ್, ಎಂಟಿಎಸ್, ಫೈರ್‌ಮ್ಯಾನ್, ಕ್ಲರ್ಕ್, ಯುಡಿಸಿ, ಸ್ಟಾಫ್ ಕಾರ್ ಡ್ರೈವರ್, ಲ್ಯಾಬೋರೇಟರಿ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟಂಟ್, ಲೈಬ್ರರಿಯನ್, ಜ್ಯೂನಿಯರ್ ಅಕೌಂಟ್ಸ್ ಆಫೀಸರ್, ಇಲೆಕ್ಟ್ರಿಷಿಯನ್, ಅಸಿಸ್ಟಂಟ್, ಕುಕ್ ಹಾಗೂ ವಿವಿಧ ಹುದ್ದೆಗಳು)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2423 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಎಂಸಿಸಿ ಬ್ಯಾಂಕ್ ನೇಮಕಾತಿ 2025

ವಯೋಮಿತಿ : ದಿನಾಂಕ 01-01-2024ಕ್ಕೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 42 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಉಡುಪಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಮಹಿಳಾ, ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 02, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 23, 2025
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 24, 2025
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಜುಲೈ 24 – ಆಗಸ್ಟ್ 04, 2025 (ತಾತ್ಕಾಲಿಕ)

SSC Phase 13 Notification 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment