SSLR Karnataka Licensed Surveyors Recruitment 2023 – Apply Online for 2000 Posts

SSLR Karnataka Licensed Surveyors Recruitment 2023 : ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಪರವಾನಗಿ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSLR Karnataka Licensed Surveyors Recruitment 2023 : Details of Vacancies

ಹುದ್ದೆ : ಪರವಾನಗಿ ಭೂಮಾಪಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
• ಪಿಯುಸಿ ಸೈನ್ಸ್ ನಲ್ಲಿ ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
• ಬಿಇ (ಸಿವಿಲ್)/ ಬಿಟೆಕ್ (ಸಿವಿಲ್)/ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣ ಅಥವಾ
• ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣ, ಅಥವಾ
• ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
• ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೇ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟ ಸಂಸ್ಥೆಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ 10 ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಾಗಿರುತ್ತಾರೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2023

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆಯುವ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಯಾವುದೇ ಸಂದರ್ಶನ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 1000 ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 02, 2023
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರವರಿ 20, 2023 ಫೆಬ್ರವರಿ 27, 2023 ಮಾರ್ಚ್ 10, 2023

SSLR Karnataka Licensed Surveyors Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment