Teachers Co-operative Bank Recruitment 2022 – Apply Online for 26 Manager, Junior Assistant Posts

Teachers Co-operative Bank Recruitment 2022 : ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Teachers Co-operative Bank Recruitment 2022 : Details of Vacancies

ಹುದ್ದೆ : ಮ್ಯಾನೇಜರ್, ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಅಸಿಸ್ಟೆಂಟ್-ಟೆಕ್ನಿಕಲ್, ಜೂನಿಯರ್ ಅಸಿಸ್ಟೆಂಟ್-ಲೀಗಲ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಮ್ಯಾನೇಜರ್1
ಜೂನಿಯರ್ ಅಸಿಸ್ಟೆಂಟ್23
ಜೂನಿಯರ್ ಅಸಿಸ್ಟೆಂಟ್-ಟೆಕ್ನಿಕಲ್1
ಜೂನಿಯರ್ ಅಸಿಸ್ಟೆಂಟ್-ಲೀಗಲ್1

ಶೈಕ್ಷಣಿಕ ಅರ್ಹತೆ :
• ಮ್ಯಾನೇಜರ್ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಯಾವುದೇ ಪದವಿಯೊಂದಿಗೆ ಅರ್ಹತೆ ಪಡೆದ ಚಾರ್ಟರ್ಡ್ ಅಕೌಂಟೆಂಟ್. ಕನಿಷ್ಠ 1 ವರ್ಷ ಬ್ಯಾಂಕಿಂಗ್ ಅನುಭವ ಹೊಂದಿರಬೇಕು.

• ಜೂನಿಯರ್ ಅಸಿಸ್ಟೆಂಟ್ – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ. ಸಹಕಾರಿ ಡಿಪ್ಲೋಮಾ ಹೊಂದಿದವರಿಗೆ ಆದ್ಯತೆ. ಪದವಿ ಅಥವಾ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

• ಜೂನಿಯರ್ ಅಸಿಸ್ಟೆಂಟ್ (ಟೆಕ್ನಿಕಲ್) – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ (ಎಂ.ಸಿ.ಎ) ಹೊಂದಿರಬೇಕು.

• ಜೂನಿಯರ್ ಅಸಿಸ್ಟೆಂಟ್ (ಲೀಗಲ್) – ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯದಿಂದ ಕಾನೂನಿನಲ್ಲಿ ಪದವಿಯೊಂದಿಗೆ ಬಾರ್ ಕೌನ್ಸಿಲ್ ಸದಸ್ಯತನ ಹೊಂದಿರಬೇಕು. ಕನಿಷ್ಠ 6 ತಿಂಗಳ ಕಂಪ್ಯೂಟರ್ ಜ್ಞಾನದೊಂದಿಗೆ, ಸೇವಾ ಅನುಭವ ಹೊಂದಿರುವವರಿಗೆ ಆದ್ಯತೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ನಿಗದಿಪಡಿಸಲಾಗಿದೆ ಹಾಗೂ
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
•ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ವರ್ಗಕ್ಕೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ

ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಕನ್ನಡ ಭಾಷೆ50 ಅಂಕ
ಸಾಮಾನ್ಯ ಆಂಗ್ಲ ಭಾಷೆ25 ಅಂಕ
ಸಾಮಾನ್ಯ ಜ್ಞಾನ25 ಅಂಕ
ಸಹಕಾರ ವಿಷಯ50 ಅಂಕ
ಭಾರತದ ಸಂವಿಧಾನ25 ಅಂಕ
ಬ್ಯಾಂಕಿನ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯ25 ಅಂಕ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಬ್ಯಾಂಕಿನ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 1000 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 08, 2022

Teachers Co-operative Bank Recruitment 2022 : Important Links

NOTIFICATIONCLICK HERE
GUIDLINES CLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment