ದ ಕುಮಟಾ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2025 – The Kumta Urban Cooperative Bank Recruitment 2025

The Kumta Urban Cooperative Bank Recruitment 2025 : ದ ಕುಮಟಾ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇದರಲ್ಲಿ ಖಾಲಿ ಇರುವ ಗುಮಾಸ್ತ ಹಾಗೂ ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

The Kumta Urban Cooperative Bank Recruitment 2025 : Details of Vacancies

ಹುದ್ದೆ : ಗುಮಾಸ್ತ, ಅಟೆಂಡರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕುಮಟಾ ತಾಲೂಕು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಗುಮಾಸ್ತ8
ಅಟೆಂಡರ್2

ಶೈಕ್ಷಣಿಕ ಅರ್ಹತೆ :
• ಗುಮಾಸ್ತ – ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ಜ್ಞಾನ ಹೊಂದಿರಬೇಕು. ಕನ್ನಡ ಓದುವ, ಬರೆಯುವ, ಅರ್ಥ ಮಾಡಿಕೊಳ್ಳುವ ಮತ್ತು ಸರಾಗವಾಗಿ ಮಾತನಾಡಲು ಬರುವಂತಿರಬೇಕು.
• ಅಟೆಂಡರ್ – ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡ ಒಂದು ಭಾಷೆಯನ್ನಾಗಿ ಓದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ ನೇಮಕಾತಿ 2025

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಇತರೇ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ :

ಹುದ್ದೆವೇತನ
ಗುಮಾಸ್ತ14550-26700
ಅಟೆಂಡರ್11000-19000

ಆಯ್ಕೆ ವಿಧಾನ : ಹುದ್ದೆಗೆ ನಿಗದಿಪಡಿಸಿದ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಸ್ವ-ಹಸ್ತಾಕ್ಷರದಲ್ಲಿ ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸ್ವತಃ/ ಭಾರತೀಯ ಅಂಚೆ ಮೂಲಕ ಕಳುಹಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಪ‌.ಜಾತಿ, ಪ.ಪಂ., ಪ್ರ1 ಅಭ್ಯರ್ಥಿಗಳು – ರೂ. 590
• ಇತರೇ ಹಿಂದುಳಿದ ವರ್ಗ, ಸಾಮಾನ್ಯ ಅಭ್ಯರ್ಥಿಗಳು – ರೂ. 1180

ಅರ್ಜಿ ಪಡೆಯುವ & ಸಲ್ಲಿಸುವ ವಿಳಾಸ : ದ ಕುಮಟಾ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಚೇರಿ, ಸುಭಾಶ ರಸ್ತೆ, ಕುಮಟಾ – 581343

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 01, 2025

The Kumta Urban Cooperative Bank Recruitment 2025 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment