The National Cooperative Bank Recruitment 2021 – Apply Now Various Post

The National Cooperative Bank Recruitment 2021 : ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

The National Cooperative Bank Recruitment 2021 : Details of Vacancies

ಹುದ್ದೆ : ಕಿರಿಯ ಸಹಾಯಕ, ವಾಹನ ಚಾಲಕ ಕಮ್ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ವೇತನ :

ಹುದ್ದೆವೇತನ
ಕಿರಿಯ ಸಹಾಯಕ18000-32670
ವಾಹನ ಚಾಲಕ ಕಮ್ ಜವಾನ13095-24030

ಶೈಕ್ಷಣಿಕ ಅರ್ಹತೆ :
• ಕಿರಿಯ ಸಹಾಯಕ ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾಗಿರಬೇಕು. ಕಂಪ್ಯೂಟರ್ ಬಳಕೆಯ ಜ್ಞಾನ, ಕನ್ನಡ ಭಾಷೆಯಲ್ಲಿ ಓದು, ಬರಹ ಹಾಗೂ ಮಾತನಾಡಲು ಬಲ್ಲವರಾಗಿರಬೇಕು. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಎಸ್ಸಿ/ಬಿಬಿಎಂ/ಬಿಕಾಂ/ಬಿಬಿಎ/ಬಿಸಿಎ/ಬಿಇ ಪದವೀಧರರಿಗೆ ಪ್ರಥಮ ಆದ್ಯತೆ ನೀಡಲಾಗುವುದು.
• ವಾಹನ ಚಾಲಕ ಕಮ್ ಜವಾನ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ನಿಯಮಗಳನ್ವಯ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ನೇಮಕಾತಿ

ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ, ಪ್ರಕಟಣೆಯಲ್ಲಿ ತಿಳಿಸಿದಂತಹ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿ.,
ಗಾಂಧಿಬಜಾರ್ ಮುಖ್ಯ ರಸ್ತೆ, ಬೆಂಗಳೂರು – 560004

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ಕಿರಿಯ ಸಹಾಯಕ ಹುದ್ದೆಗೆ ರೂ. 1,000, ವಾಹನ ಚಾಲಕ ಕಮ್ ಜವಾನ ಹುದ್ದೆಗೆ ರೂ. 500 ಮೌಲ್ಯದ ಡಿಡಿಯನ್ನು ವ್ಯವಸ್ಥಾಪಕ ನಿರ್ದೇಶಕರು, ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಬೆಂಗಳೂರು ಇವರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 10, 2021

The National Cooperative Bank Recruitment 2021 : Important Links

ಪ್ರಕಟಣೆ : Click Here
ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment