The Railway Cooperative Bank Mysore Recruitment 2023 : ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
The Railway Cooperative Bank Mysore Recruitment 2023 : Details of Vacancies
ಹುದ್ದೆ : ಶಾಖಾ ವ್ಯವಸ್ಥಾಪಕರು, ಲೆಕ್ಕಿಗರು, ಹಿರಿಯ ನಗದುಗಾರರು, ಕಂಪ್ಯೂಟರ್ ಮೇಲ್ವಿಚಾರಕರು, ಕಿರಿಯ ಗುಮಾಸ್ತರು, ಕಛೇರಿ ಸಹಾಯಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶಾಖಾ ವ್ಯವಸ್ಥಾಪಕರು | 1 | 35,400 |
ಲೆಕ್ಕಿಗರು | 4 | 35,400 |
ಹಿರಿಯ ನಗದುಗಾರರು | 1 | 35,400 |
ಕಂಪ್ಯೂಟರ್ ಮೇಲ್ವಿಚಾರಕರು | 1 | 29,200 |
ಕಿರಿಯ ಗುಮಾಸ್ತರು | 10 | 19,900 |
ಕಛೇರಿ ಸಹಾಯಕರು | 4 | 18,000 |
ಶೈಕ್ಷಣಿಕ ಅರ್ಹತೆ :
• ಶಾಖಾ ವ್ಯವಸ್ಥಾಪಕರು – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
• ಲೆಕ್ಕಿಗರು – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು (ವಾಣಿಜ್ಯ, ಸಹಕಾರ/ ನಿರ್ವಹಣೆ ಪದವಿ ಹೊಂದಿರಬೇಕು). ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
• ಹಿರಿಯ ನಗದುಗಾರರು – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
• ಕಂಪ್ಯೂಟರ್ ಮೇಲ್ವಿಚಾರಕರು – ಕಂಪ್ಯೂಟರ್ ಅಪ್ಲಿಕೇಷನ್, ಬಿ.ಎಸ್.ಸಿ/ ಬಿ.ಸಿ.ಎ/ ಬಿ.ಇ ಇನ್ ಕಂಪ್ಯೂಟರ್ ಸೈನ್ಸ್ ನಲ್ಲಿ ಪದವಿ ಪಡೆದಿರಬೇಕು.
• ಕಿರಿಯ ಗುಮಾಸ್ತರು – ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಮಾಡಿರಬೇಕು.
• ಕಛೇರಿ ಸಹಾಯಕರು – ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಬ್ಯಾಂಕಿನ ಅಧಿಸೂಚನೆಯಲ್ಲಿ ನೀಡಲಾದ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗಳು ಅರ್ಜಿ ಶುಲ್ಕದ ಡಿಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.
ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿ. ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು – 570001
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು – ರೂ. 1,000
• ಪ.ಜಾತಿ, ಪ.ಪಂ., ಪ್ರವರ್ಗ – 01, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಪ್ಟ್/ ಪೇ ಆರ್ಡರ್ ಮುಖಾಂತರ ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿ. ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು ಇವರಿಗೆ ಪಾವತಿಸುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 07, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 28, 2023
The Railway Cooperative Bank Mysore Recruitment 2023 : Important Links
NOTIFICATION | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.