The Rajajinagar Cooperative Bank Recruitment 2021 : ರಾಜಾಜಿನಗರ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
The Rajajinagar Cooperative Bank Recruitment 2021 : Details of Vacancies
ಹುದ್ದೆ : ಸಹಾಯಕ ವ್ಯವಸ್ಥಾಪಕರು, ಲೆಕ್ಕಿಗರು, ಸಹಾಯಕ ಲೆಕ್ಕಾಧಿಕಾರಿ, ಆಂತರಿಕ ಲೆಕ್ಕಪರಿಶೋಧಕರು, ಕ್ಷೇತ್ರಾಧಿಕಾರಿ, ಮೇಲ್ವಿಚಾರಕರು, ಮುಖ್ಯ ನಗದು ಅಧಿಕಾರಿ, ಕಿರಿಯ ಸಹಾಯಕ, ಭದ್ರತಾ ರಕ್ಷಕ ಹಾಗೂ ವಾಹನ ಚಾಲಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
• ಸಹಾಯಕ ವ್ಯವಸ್ಥಾಪಕರು, ಲೆಕ್ಕಿಗರು ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಶೇ. 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಎಂ.ಕಾಂ/ ಎಂ.ಬಿ.ಎ/ ಎಂ.ಸಿ.ಎ ಸ್ನಾತಕೋತ್ತರ ಪದವಿ ಪಡೆದಿರಬೇಕು.
• ಸಹಾಯಕ ಲೆಕ್ಕಾಧಿಕಾರಿ, ಆಂತರಿಕ ಲೆಕ್ಕಪರಿಶೋಧಕರು, ಕ್ಷೇತ್ರಾಧಿಕಾರಿ, ಮೇಲ್ವಿಚಾರಕರು, ಮುಖ್ಯ ನಗದು ಅಧಿಕಾರಿ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ. 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಬಿ.ಕಾಂ/ ಬಿ.ಬಿ.ಎಂ/ ಎಂ.ಸಿ.ಎ ಪದವಿ ಪಡೆದಿರಬೇಕು.
• ಕಿರಿಯ ಸಹಾಯಕ ಹುದ್ದೆಗೆ ಶೇ. 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಬಿ.ಕಾಂ/ ಬಿ.ಬಿ.ಎಂ/ ಬಿ.ಸಿ.ಎ ಪದವಿ ಪಡೆದಿರಬೇಕು.
• ಭದ್ರತಾ ರಕ್ಷಕ, ವಾಹನ ಚಾಲಕರು ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿದ್ದು ಜೊತೆಗೆ 4 ಚಕ್ರ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ವಯೋಮಾನ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾ/ಪ.ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,950 ರಿಂದ ರೂ. 62,600ವರೆಗೂ ವೇತನ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ
ದಿ ರಾಜಾಜಿನಗರ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳು, ಇತ್ತೀಚಿನ ಭಾವಚಿತ್ರ ಮತ್ತು ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳ ಪ್ರತಿಗಳ ಜೊತೆಗೆ ಅರ್ಜಿಯನ್ನು ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ವ್ಯವಸ್ಥಾಪಕರು, ಅಂಚೆ ಪೆಟ್ಟಿಗೆ ಸಂಖ್ಯೆ 1036,
ದಿ ರಾಜಾಜಿನಗರ ಕೋ~ಆಪ. ಬ್ಯಾಂಕ್ ಲಿಮಿಟೆಡ್, ರಾಜಾಜಿನಗರ ಪೋಸ್ಟ್ ಆಫೀಸ್, ರಾಜಾಜಿನಗರ, ಬೆಂಗಳೂರು – 560 010
ಸೂಚನೆ : ಎಂ.ಸಿ.ಎ/ ಜೆ.ಡಿ.ಸಿ ಹಾಗೂ ಸಹಕಾರ ಬ್ಯಾಂಕುಗಳಿಗೆ ಸಂಬಂಧಪಟ್ಟಂತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಹಾಗೂ ಇತರೆ ಸಹಕಾರ ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸಿ, ಅನುಭವ ಹೊಂದಿರುವ ಹಾಗೂ ಕನ್ನಡವನ್ನು ಓದಲು, ಬರೆಯಲು ಮತ್ತು ಬೆರಳಚ್ಚು ಮಾಡಲು ಬರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಏನು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 30, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 14, 2021
The Rajajinagar Cooperative Bank Recruitment 2021 : Important Links
ಅಧಿಸೂಚನೆ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.