ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನೇಮಕಾತಿ 2025 – The Sirsi Urban Cooperative Bank Recruitment 2025

The Sirsi Urban Cooperative Bank Recruitment 2025

The Sirsi Urban Cooperative Bank Recruitment 2025 : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಇದರಲ್ಲಿ ಖಾಲಿಯಿರುವ ಫ್ರಂಟ್ ಡೆಸ್ಕ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

The Sirsi Urban Cooperative Bank Recruitment 2025 : Details of Vacancies

ಹುದ್ದೆ : ಫ್ರಂಟ್ ಡೆಸ್ಕ್ ಅಸೋಸಿಯೇಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಶಿರಸಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಕಾಂ/ ಬಿ.ಬಿ.ಎ/ ಬಿ.ಬಿ.ಎಂ/ ಬಿ.ಇ/ ಬಿ.ಎಸ್ಸಿ/ಬಿ.ಎ ಪದವಿಯನ್ನು ಹೊಂದಿರಬೇಕು (ಪದವಿಯ ಎಲ್ಲಾ ವರ್ಷದ ಸರಾಸರಿ ಶೇಕಡಾ 50 ಮತ್ತು 50 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರಬೇಕು). ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂಗಡ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಪಡೆಯುವ ಅಂಕಗಳನ್ನು ಶೇಕಡಾ 85ಕ್ಕೆ ನಿಗದಿಪಡಿಸಿ ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ, ಆಯ್ಕೆ ಮಾಡಲಾಗುವುದು. ಒಟ್ಟು 200 ಅಂಕಗಳ ಲಿಖಿತ ಪರೀಕ್ಷೆ ಇದೆ.

ವಿಷಯಅಂಕಗಳು
ಕನ್ನಡ ಭಾಷೆ 50
ಸಾಮಾನ್ಯ ಇಂಗ್ಲೀಷ್ 25
ಸಾಮಾನ್ಯ ಜ್ಞಾನ 25
ಸಹಕಾರ ವಿಷಯ50
ಭಾರತ ಸಂವಿಧಾನ25
ಬ್ಯಾಂಕಿನ ಉದ್ದೇಶ & ಕಾರ್ಯಚಟುವಟಿಕೆ25

ಉದ್ಯೋಗ ಮಾಹಿತಿ : ಆದಾಯ ತೆರಿಗೆ ಇಲಾಖೆ ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್, ಕೇಂದ್ರ ಕಛೇರಿ, ರಾಯರಪೇಟೆ, ಶಿರಸಿ – 581 401 (ಉ.ಕ)

ನಿಗದಿತ ಅರ್ಜಿ ಶುಲ್ಕದ ವಿವರ : ರೂ. 1000 ಅರ್ಜಿ ಶುಲ್ಕವನ್ನು “ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ಲಿಮಿಟೆಡ್” ಹೆಸರಿಗೆ ಡಿಮಾಂಡ್ ಡ್ರಾಪ್ಟ್ ಮೂಲಕ ಪಾವತಿಸಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 18, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 08, 2025

The Sirsi Urban Cooperative Bank Recruitment 2025 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment