Tumkur DC Office Recruitment 2022 – Apply for 11 Loaders and Cleaners Posts

Tumkur DC Office Recruitment 2022 : ತುಮಕೂರು ಜಿಲ್ಲೆಯ ಪುರಸಭೆ/ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಕನಿಷ್ಠ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Tumkur DC Office Recruitment 2022 : Details of Vacancies

ಹುದ್ದೆ : ಲೋಡರ್ಸ್ ಮತ್ತು ಕ್ಲೀನರ್ಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣ ಪಂಚಾಯಿತಿ ಮತ್ತು ಚಿಕ್ಕನಾಯಕನಹಳ್ಳಿ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 11 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕನಿಷ್ಠ ಅರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್ ಅಥವಾ ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ರವರೆಗೂ ವೇತನ ನೀಡಲಾಗುತ್ತದೆ

ಉದ್ಯೋಗ ಮಾಹಿತಿ : ಭೇರ್ ಫೂಟ್ ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ನಮೂನೆ ಪಡೆಯುವ ವಿಳಾಸ : ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಛೇರಿ, ತುಮಕೂರು ಮತ್ತು ಆಯಾ ಪುರಸಭೆ/ ಪಟ್ಟಣ ಪಂಚಾಯಿತಿ

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಛೇರಿ, ತುಮಕೂರು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31, 2022

Tumkur DC Office Recruitment 2022 : Important Links

ಪ್ರಕಟಣೆ Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment