Tumkur District Court Recruitment 2021 : 21 ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Tumkur District Court Recruitment 2021 : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಬೆರಳಚ್ಚುಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ದಿನಾಂಕ ಮಾರ್ಚ್ 04, 2020 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೊರೊನಾ ಕಾರಣದಿಂದ ತಡೆಹಿಡಿಯಲಾಗಿತ್ತು. ಈಗ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮಾನ್ಯ ಉಚ್ಚನ್ಯಾಯಾಲಯದ ನಿರ್ದೇಶನದನ್ವಯ ಆರಂಭಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Tumkur District Court Recruitment 2021 : Details of Vacancies

ಹುದ್ದೆ : ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಜಾರಿಪೇದೆ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವಯೋಮಾನ
ಬೆರಳಚ್ಚುಗಾರ07ರೂ. 21,400-42,000
ಬೆರಳಚ್ಚು ನಕಲುಗಾರ03ರೂ. 21,400-42,000
ಜಾರಿಪೇದೆ11ರೂ. 19,950-37,900

ಶೈಕ್ಷಣಿಕ ಅರ್ಹತೆ :
• ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಬೆರಳಚ್ಚುಗಾರ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
• ಬೆರಳಚ್ಚು ನಕಲುಗಾರ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
• ಜಾರಿಪೇದೆ ಹುದ್ದೆಗೆ ವಾಹನ ಚಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ನಿಗದಿಪಡಿಸಲಾದ ವಿದ್ಯಾರ್ಹತೆ ಪರೀಕ್ಷೆಯಲ್ಲಿನ ಮತ್ತು ಅರ್ಹತಾ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ನಂತರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಉದ್ಯೋಗ ಮಾಹಿತಿ : Cantonment Board Belgaum Recruitment 2021 : 13 ಕ್ಲರ್ಕ್, ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತುಮಕೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಪ್ರವರ್ಗ 2ಎ,2ಬಿ,3ಎ,3ಬಿ, ಸಾಮಾನ್ಯ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 23, 2021
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 24, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 26, 2021

Tumkur District Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೊದಲು ಸಲ್ಲಿಸಿರುವ ಅರ್ಜಿಗಳು ಹಾಗೂ ಶುಲ್ಕವನ್ನೇ ಪರಿಗಣಿಸಲಾಗುತ್ತದೆ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.