ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2024 – Tumkur District Court Recruitment 2024

Tumkur District Court Recruitment 2024 : ತುಮಕೂರು ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಸೇವಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Tumkur District Court Recruitment 2024 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 60 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಶೀಘ್ರಲಿಪಿಗಾರರು ಗ್ರೇಡ್ 31027650-52650
ಬೆರಳಚ್ಚುಗಾರರು521400-42000
ಬೆರಳಚ್ಚು ನಕಲುಗಾರರು521400-42000
ಸೇವಕ4017000-28950

ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ PDO ಹುದ್ದೆಗಳ ನೇಮಕಾತಿ 2024

ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಸೇವಕ – ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ :
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಸೇವಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : KPSC ಇಂದ ವಿವಿಧ ಇಲಾಖೆಯಲ್ಲಿನ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 12, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 11, 2024

Tumakuru District Court Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment