
Tumkur District Court Recruitment 2026 : ತುಮಕೂರು ಜಿಲ್ಲಾ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-3 ಹಾಗೂ ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Tumkur District Court Recruitment 2026 : Details of Vacancies
ಹುದ್ದೆ :
ಶೀಘ್ರಲಿಪಿಗಾರ ಗ್ರೇಡ್-3, ಬೆರಳಚ್ಚುಗಾರ
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಶೀಘ್ರಲಿಪಿಗಾರ ಗ್ರೇಡ್-3 | 10 |
| ಬೆರಳಚ್ಚುಗಾರ | 14 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್-3 –
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರ –
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2026
ವಯೋಮಾನ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35+5 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38+5 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40+5 ವರ್ಷ
ವೇತನ :
| ಹುದ್ದೆ | ವೇತನ |
| ಶೀಘ್ರಲಿಪಿಗಾರ ಗ್ರೇಡ್-3 | ರೂ. 44,425 – ರೂ. 83,700 |
| ಬೆರಳಚ್ಚುಗಾರ | ರೂ. 34,100 – ರೂ. 67,600 |
ಆಯ್ಕೆ ವಿಧಾನ :
ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 5 ಅಭ್ಯರ್ಥಿಗಳಂತೆ (1:5ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂಗಡ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 25, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 24, 2026
Tumkur District Court Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.