Tumkur Zilla Panchayat Recruitment 2022 : ತುಮಕೂರು ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತಲಾ ಒಬ್ಬರಂತೆ ಆಡಳಿತ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Tumkur Zilla Panchayat Recruitment 2022 : Details of Vacancies
ಹುದ್ದೆ : ಆಡಳಿತ ಸಹಾಯಕರು (Administrative Assistant)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತುಮಕೂರು ಜಿಲ್ಲೆಯ ತಾಲ್ಲೂಕು ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿ.ಕಾಂ ಪದವಿ ಜೊತೆಗೆ ಕನ್ನಡ & ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಹಾಗೂ MS Word, MS Excel, PPT ಸೇರಿದಂತೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಗರಿಷ್ಠ 45 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದಿನಾಂಕ ಮಾರ್ಚ್ 31, 2022 ಕ್ಕೆ 45 ವರ್ಷ ಮೀರಿರಬಾರದು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ : ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತಪಡಿಸಿಕೊಂಡು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಆಯ್ಕೆ ಮಾಡಲಾಗುವುದು.
ತುಮಕೂರು ಜಿಲ್ಲೆಯ ತಾಲ್ಲೂಕು ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತುಮಕೂರು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 14, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 31, 2022
Tumkur Zilla Panchayat Recruitment 2022 : Important Links
ಅಧಿಸೂಚನೆ | Click Here |
ಅರ್ಜಿ ಸಲ್ಲಿಸಿ | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.