Udupi District Court Recruitment 2021 – Apply Online for 8 Stenographer Vacancy

Udupi District Court Recruitment 2021 : ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Udupi District Court Recruitment 2021 : Details of Vacancies

ಹುದ್ದೆ : ಶೀಘ್ರಲಿಪಿಗಾರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಯು ನಿಗದಿಪಡಿಸಿದ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿ

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಪ್ರವರ್ಗ 2ಎ,2ಬಿ,3ಎ,3ಬಿ, ಪ್ರವರ್ಗ 1, ಸಾಮಾನ್ಯ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 30, 2021
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 04, 2021

Udupi District Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment