UHS Bagalkot Recruitment 2023 – Apply for 04 Programme Assistant, Driver, Gardener Posts

UHS Bagalkot Recruitment 2023 : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

UHS Bagalkot Recruitment 2023 : Details of Vacancies

ಹುದ್ದೆ : ಪ್ರೋಗ್ರಾಮ್ ಅಸಿಸ್ಟೆಂಟ್ (ಲ್ಯಾಬ್ ಟೆಕ್ನಿಷಿಯನ್), ಡ್ರೈವರ್ (ಲಘು ವಾಹನ), ಗಾರ್ಡನರ್

ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಪ್ರೋಗ್ರಾಮ್ ಅಸಿಸ್ಟೆಂಟ್0135400-112400
ಡ್ರೈವರ್0221400-42000
ಗಾರ್ಡನರ್0117000-28950

ಶೈಕ್ಷಣಿಕ ಅರ್ಹತೆ :
• ಪ್ರೋಗ್ರಾಮ್ ಅಸಿಸ್ಟೆಂಟ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹೊರ್ಟಿಕಲ್ಚರ್/ ಅಗ್ರಿಕಲ್ಚರ್/ ಅಗ್ರಿಕಲ್ಚರ್ ಮಾರ್ಕೆಟಿಂಗ್ & ಕೋ-ಆಪರೇಷನ್/ ಸೆರಿಕಲ್ಚರ್/ ಹೋಮ್ ಸೈನ್ಸ್/ ಅಗ್ರಿಕಲ್ಚರ್ ಇಂಜಿನಿಯರಿಂಗ್/ ವೆಟರ್ನರಿ ಸೈನ್ಸ್/ ಅನಿಮಲ್ ಸೈನ್ಸ್/ ಫಾರೆಸ್ಟ್ರಿ/ ಫುಡ್ ಟೆಕ್ನಾಲಜಿ/ ಅಗ್ರಿಕಲ್ಚರ್ ಬಯೋಟೆಕ್ನಾಲಜಿ ಪದವಿ ಹೊಂದಿರಬೇಕು.
• ಡ್ರೈವರ್ – ಎಸ್.ಎಸ್.ಎಲ್.ಸಿ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. 2 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಲಘು ವಾಹನ ಚಾಲನೆಯಲ್ಲಿ ಅನುಭವ ಹೊಂದಿರಬೇಕು.
• ಗಾರ್ಡನರ್ – ಎಸ್.ಎಸ್.ಎಲ್.ಸಿ ಜೊತೆಗೆ ತೋಟಗಾರಿಕೆ/ ಕೃಷಿಯಲ್ಲಿ ಕನಿಷ್ಠ 10 ತಿಂಗಳ ತರಬೇತಿ ಪಡೆದಿರಬೇಕು.

ವಯೋಮಾನ : ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ 2023

ಆಯ್ಕೆ ವಿಧಾನ : ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಡ್ರೈವರ್ ಹಾಗೂ ಗಾರ್ಡನರ್ ಹುದ್ದೆಗೆ ಪ್ರಾಕ್ಟಿಕಲ್ ಟೆಸ್ಟ್ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆಯು ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಸಂಸ್ಥೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ರಿಜಿಸ್ಟ್ರಾರ್, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉದ್ಯಾನಗಿರಿ, ಬಾಗಲಕೋಟೆ – 587 104

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 600
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
• ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಅಥವಾ ಈ ಕೆಳಗಡೆ ನೀಡಲಾದ ಬ್ಯಾಂಕ್ ಚಲನ್ ಪ್ರತಿಯನ್ನು ಡೌನ್ಲೋಡ್ ಮಾಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಯಲ್ಲಿ ಚಲನ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 06, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 04, 2023

UHS Bagalkot Recruitment 2023 : Important Links

NOTIFICATIONCLICK HERE
APPLICATION FORM – PROGRAMME ASSISTANT CLICK HERE
APPLICATION FORM – (Service Personnel)CLICK HERE
BANK CHALLAN CLICK HERE
SYLLABUSCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment