ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 – Union Bank of India Recruitment 2025

Union Bank of India Recruitment 2025

Union Bank of India Recruitment 2025 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Union Bank of India Recruitment 2025 : Details of Vacancies

ಹುದ್ದೆ : ಸ್ಪೆಷಲಿಸ್ಟ್ ಆಫೀಸರ್ (ಅಸಿಸ್ಟಂಟ್ ಮ್ಯಾನೇಜರ್-ಕ್ರೆಡಿಟ್, ಅಸಿಸ್ಟಂಟ್ ಮ್ಯಾನೇಜರ್-ಐಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಸಿಸ್ಟಂಟ್ ಮ್ಯಾನೇಜರ್ (ಕ್ರೆಡಿಟ್)250
ಅಸಿಸ್ಟಂಟ್ ಮ್ಯಾನೇಜರ್ (ಐಟಿ)250

ಶೈಕ್ಷಣಿಕ ಅರ್ಹತೆ :
• ಅಸಿಸ್ಟಂಟ್ ಮ್ಯಾನೇಜರ್ (ಕ್ರೆಡಿಟ್) – ಯಾವುದೇ ಪದವಿ ಮತ್ತು ಸಿಎ/ಸಿಎಂಎ(ಐಸಿಡಬ್ಲ್ಯೂಎ)/ಸಿಎಸ್ ಅಥವಾ ಎಂಬಿಎ/ ಎಂಎಂಎಸ್/ ಪಿಜಿಡಿಎಂ/ ಪಿಜಿಡಿಬಿಎಂ.
• ಅಸಿಸ್ಟಂಟ್ ಮ್ಯಾನೇಜರ್ (ಐಟಿ) – ಬಿಇ/ ಬಿ.ಟೆಕ್/ ಎಂಸಿಎ/ ಎಂಎಸ್ಸಿ (ಐಟಿ)/ ಎಂಎಸ್/ ಎಂ.ಟೆಕ್.

ಉದ್ಯೋಗ ಮಾಹಿತಿ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2025

ವಯೋಮಾನ : ದಿನಾಂಕ 01/04/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 22 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ಗ್ರೂಪ್ ಡಿಸ್ಕಷನ್, ಸ್ಕ್ರೀನಿಂಗ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಆನ್‌ಲೈನ್‌ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 177
• ಉಳಿದ ಅಭ್ಯರ್ಥಿಗಳು – ರೂ. 1180

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 30, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 20, 2025

Union Bank of India Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment