Union Bank Recruitment 2021 : 347 ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Union Bank Recruitment 2021 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IDBI Bank Recruitment 2021 : Details of Vacancies

ಹುದ್ದೆ : ಹಿರಿಯ ವ್ಯವಸ್ಥಾಪಕರು, ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 347 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆವಯೋಮಾನವೇತನ
ಹಿರಿಯ ವ್ಯವಸ್ಥಾಪಕರು30-40ರೂ. 63,840
ವ್ಯವಸ್ಥಾಪಕರು25-35ರೂ. 48,170
ಸಹಾಯಕ ವ್ಯವಸ್ಥಾಪಕರು20-30ರೂ. 36,000

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಗುಂಪು ಚರ್ಚೆ ಹಾಗೂ ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ/ ಒಬಿಸಿ ಅಭ್ಯರ್ಥಿಗಳು ರೂ. 850 ಪಾವತಿಸಬೇಕು. ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 12, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 03, 2021

Union Bank Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.