Urban Bank Recruitment 2021 – Apply Now 06 Posts

Urban Bank Recruitment 2021 : ದಿ ಯರಗಟ್ಟಿ ಅರ್ಬನ್ ಕೋ-ಒಪರೇಟಿವ್ ಕ್ರೆಡಿಟ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Urban Bank Recruitment 2021 : Details of Vacancies

ಹುದ್ದೆ : ಮ್ಯಾನೇಜರ್, ಕಿರಿಯ ಸಹಾಯಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಮ್ಯಾನೇಜರ್0122800-43200
ಕಿರಿಯ ಸಹಾಯಕ0612500-24000

ಶೈಕ್ಷಣಿಕ ಅರ್ಹತೆ :
ಮ್ಯಾನೇಜರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡ ಐಚ್ಛಿಕ ವಿಷಯ ಹೊಂದಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿಯೂ ಕನ್ನಡ ವಿಷಯ ಹೊಂದಿರಬೇಕು. ಗಣಕಯಂತ್ರದ ಕಾರ್ಯಾಚರಣೆ ಹಾಗೂ ಅಪ್ಲಿಕೇಶನ ಕೋರ್ಸ್ ಸರಕಾರಿ ಮಾನ್ಯತೆ ಹೊಂದಿದ ಸಂಸ್ಥೆಯಿಂದ ಪಡೆದುಕೊಂಡಿರಬೇಕು.
ಕಿರಿಯ ಸಹಾಯಕ ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾಗಿರಬೇಕು. ಕನ್ನಡ ಭಾಷೆಯ ಜ್ಞಾನದೊಂದಿಗೆ ಕನ್ನಡ ಓದಲು, ಬರೆಯಲು, ತಿಳಿದುಕೊಳ್ಳಲು ಮತ್ತು ಮಾತನಾಡಲು ಬರಬೇಕು. ಗಣಕಯಂತ್ರದ ಕಾರ್ಯಾಚರಣೆಯ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ನಿಯಮಗಳನ್ವಯ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಅಧಿಸೂಚನೆ ಪ್ರಕಟ

ಯರಗಟ್ಟಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಚೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಪ್ರಧಾನ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯ ಫಾರ್ಮನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ, ಅರ್ಜಿ ನಮೂನೆಯಲ್ಲಿ ತಿಳಿಸಿದಂತಹ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಖುದ್ದಾಗಿ ಹಾಜರಾಗಿ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ದಿ ಯರಗಟ್ಟಿ ಅರ್ಬನ್ ಕೋ-ಒಪರೇಟಿವ್ ಕ್ರೆಡಿಟ್ ಬ್ಯಾಂಕ್ ಲಿಮಿಟೆಡ್,
ಯರಗಟ್ಟಿ ತಾಲ್ಲೂಕು, ಬೆಳಗಾವಿ ಜಿಲ್ಲೆ – 591129

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ಮ್ಯಾನೇಜರ್ ಹುದ್ದೆಗೆ ರೂ. 1,200, ಕಿರಿಯ ಸಹಾಯಕ ಹುದ್ದೆಗೆ ರೂ. 1000 ಶುಲ್ಕವನ್ನು ಡಿಡಿ ಮೂಲಕ ಅಥವಾ ಕಛೇರಿಗೆ ನೇರವಾಗಿ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 12, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 02, 2021

Urban Bank Recruitment 2021 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment