Uttara Kannada District Court Recruitment 2022 – Apply Online for 19 Stenographer, Peon Posts

Uttara Kannada District Court Recruitment 2022 : ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada District Court Recruitment 2022 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3 ಹಾಗೂ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರರು0627650-52650
ಜವಾನ1317000-28950

ಶೈಕ್ಷಣಿಕ ಅರ್ಹತೆ :

ಶೀಘ್ರಲಿಪಿಗಾರರು – ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು (2 ವರ್ಷ) & ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ (5 ಮತ್ತು 6ನೇ ಸೆಮಿಸ್ಟರ್)/ಸೆಕ್ರೆಟರಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜವಾನ – 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ :

ಶೀಘ್ರಲಿಪಿಗಾರ – ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
ಜವಾನ – ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 01, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 02, 2022

Uttara Kannada District Court Recruitment 2022 : Important Links

(ಶೀಘ್ರಲಿಪಿಗಾರ) ಅಧಿಸೂಚನೆClick Here
(ಜವಾನ) ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Uttara Kannada District Court Recruitment 2022 – Apply Online for 19 Stenographer, Peon Posts”

Leave a Comment