ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2024 – Uttara Kannada District Gram Panchayat Recruitment 2024

Uttara Kannada District Gram Panchayat Recruitment 2024 : ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada District Gram Panchayat Recruitment 2024 : Details of Vacancies

ಹುದ್ದೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿಗಳು : ಕಾರವಾರ ತಾಲೂಕಿನ ಹೊಟೆಗಾಳಿ, ಹೊನ್ನಾವರ ತಾಲೂಕಿನ ಮಂಕಿ ಸಿ (ಚಿತ್ತಾರ), ಮಾಗೋಡ, ಕುಮಟಾ ತಾಲೂಕಿನ ಸೊಪ್ಪಿನಹೊಸಳ್ಳಿ, ಶಿರಸಿ ತಾಲೂಕಿನ ಸೋಂದಾ, ಹಳಿಯಾಳ ತಾಲೂಕಿನ ತಟ್ಟಿಗೇರಿ, ಬಿ.ಕೆ. ಹಳ್ಳಿ, ಸಿದ್ದಾಪುರ ತಾಲೂಕಿನ ತಂಡಾಗುಂಡಿ, ಅಂಕೋಲಾ ತಾಲೂಕಿನ ಮೊಗಟಾ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆ ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯಸ್ಸಿನ ಮೀತಿ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಛೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿಯಿರುವ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 01, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 20, 2024

Uttara Kannada District Gram Panchayat Recruitment 2024 : Important Links

ಪ್ರಕಟಣೆCLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಉಪ ಕಾರ್ಯದರ್ಶಿ (ಆಡಳಿತ) ಹಾಗೂ ಸದಸ್ಯ ಕಾರ್ಯದರ್ಶಿ, ಗ್ರಾಪಂ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರ ನೇಮಕಾತಿ ಸಮಿತಿ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಅವರನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment