ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2024 – Uttara Kannada District Grama Panchayat Recruitment 2024

Uttara Kannada District Grama Panchayat Recruitment 2024 : ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada District Grama Panchayat Recruitment 2024 : Details of Vacancies

ಹುದ್ದೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು.

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಬಿ ಅನಂತವಾಡಿ, ಮಾಗೋಡ, ಕೆಳಗಿನೂರು, ಶಿರಸಿ ತಾಲೂಕಿನ ನೆಗ್ಗು, ಕುಮಟಾ ತಾಲೂಕಿನ ಹನೇಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಪಂಚಾಯಿತಿಹುದ್ದೆಗಳ ಸಂಖ್ಯೆ
ಮಂಕಿ ಬಿ ಅನಂತವಾಡಿ1
ಮಾಗೋಡ1
ಕೆಳಗಿನೂರು1
ನೆಗ್ಗು1
ಹನೇಹಳ್ಳಿ1

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2024

ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯಿತಿ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 12, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2024

Uttara Kannada District Grama Panchayat Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಕೆಳಗಿನೂರು, ನೆಗ್ಗು ಮತ್ತು ಹನೇಹಳ್ಳಿಯಲ್ಲಿ ಅರ್ಜಿ ಸಲ್ಲಿಸುವವರು ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಮಂಕಿ ಬಿ ಅನಂತವಾಡಿ ಮತ್ತು ಮಾಗೋಡ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ನಿಗದಿಪಡಿಸಿದ ಮೀಸಲಾತಿಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆಯಾ ತಾಲೂಕಿನ ಬೇರೆ ಗ್ರಾಮ ಪಂಚಾಯಿತಿಗೆ ಒಳಪಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment