Uttara Kannada Gram Panchayat Recruitment 2022 – Apply for 5 Library Supervisor Posts

Uttara Kannada Gram Panchayat Recruitment 2022 : ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada Gram Panchayat Recruitment 2022 : Details of Vacancies

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗುಂಜಾವತಿ (ಪ್ರವರ್ಗ 2ಬಿ), ಯಲ್ಲಾಪುರ ತಾಲೂಕಿನ ಇಡಗುಂದಿ (ಸಾಮಾನ್ಯ ಮಹಿಳಾ ಅಭ್ಯರ್ಥಿ), ಕಾರವಾರ ತಾಲೂಕಿನ ಹೊಟೆಗಾಳಿ (ಪರಿಶಿಷ್ಟ ಜಾತಿ ಅಂಗವಿಕಲ ಅಭ್ಯರ್ಥಿ), ಹಳಿಯಾಳ ತಾಲೂಕಿನ ಸಾಂಬ್ರಾಣಿ (ಸಾಮಾನ್ಯ ಮಾಜಿ ಸೈನಿಕ), ಅಂಕೋಲಾ ತಾಲೂಕಿನ ಬೆಳಂಬಾರ (ಪರಿಶಿಷ್ಟ ಜಾತಿ) ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಹುದ್ದೆಗಳು ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಆಯಾ ಗ್ರಾಮ ಪಂಚಾಯ್ತಿ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಭ್ಯರ್ಥಿಗಳಾಗಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸತಕ್ಕದ್ದು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 09, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 05, 2022

Uttara Kannada Gram Panchayat Recruitment 2022 : Important Links

ಪ್ರಕಟಣೆClick Here

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ ದೂರವಾಣಿ ಸಂಖ್ಯೆಗೆ 08382-226564 ಸಂಪರ್ಕಿಸಿ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

3 thoughts on “Uttara Kannada Gram Panchayat Recruitment 2022 – Apply for 5 Library Supervisor Posts”

Leave a Comment