ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ 2023 – Uttara Kannada Zilla Panchayat Recruitment 2023

Uttara Kannada Zilla Panchayat Recruitment 2023 : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada Zilla Panchayat Recruitment 2023 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಕೃಷಿ), ತಾಲೂಕಾ ಪಂಚಾಯತ್ ಆಡಳಿತ ಸಹಾಯಕರು, ತಾಲೂಕಾ ಮಾಹಿತಿ ಶಿಕ್ಷಣ ಮತ್ತು ಸಂವಹನ (ಟಿಐಇಸಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ತಾಂತ್ರಿಕ ಸಹಾಯಕರು (ಸಿವಿಲ್)228000 + 2000 T.A.
ತಾಂತ್ರಿಕ ಸಹಾಯಕರು (ಅರಣ್ಯ)328000 + 2000 T.A
ತಾಂತ್ರಿಕ ಸಹಾಯಕರು (ತೋಟಗಾರಿಕೆ)628000 + 2000 T.A
ತಾಂತ್ರಿಕ ಸಹಾಯಕರು (ಕೃಷಿ)128000 + 2000 T.A
ತಾಲೂಕಾ ಪಂಚಾಯತ್ ಆಡಳಿತ ಸಹಾಯಕರು122000 + 2000 T.A
ತಾಲೂಕಾ ಮಾಹಿತಿ ಶಿಕ್ಷಣ ಮತ್ತು ಸಂವಹನ (ಟಿಐಇಸಿ)128000 + 2000 T.A

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ ಸಿವಿಲ್
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ/ಎಂ.ಎಸ್ಸಿ ಫಾರೆಸ್ಟ್ರಿ
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ/ಎಂ.ಎಸ್ಸಿ ಹೊರ್ಟಿಕಲ್ಚರ್
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ/ಎಂ.ಎಸ್ಸಿ ಅಗ್ರಿಕಲ್ಚರ್
• ತಾಲೂಕಾ ಪಂಚಾಯತ್ ಆಡಳಿತ ಸಹಾಯಕರು – ಬಿ.ಕಾಂ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ತಾಲೂಕಾ ಮಾಹಿತಿ ಶಿಕ್ಷಣ ಮತ್ತು ಸಂವಹನ (ಟಿಐಇಸಿ) – ಸ್ನಾತಕೋತ್ತರ ಪದವಿ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : KEAಯಿಂದ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ನೇಮಕಾತಿ 2023

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಅರ್ಹ ಅಭ್ಯರ್ಥಿಯನ್ನು ಮೆರಿಟ್, ಕಂಪ್ಯೂಟರ್ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 2 ರಿಂದ 3 ವರ್ಷಗಳ ಅನುಭವ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 17, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 26, 2023

Uttara Kannada Zilla Panchayat Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 08382-226862

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment