Vijayanagar Zilla Panchayat Recruitment 2021 : ಹೊಸದಾಗಿ ಸೃಜನೆಯಾಗಿರುವ ವಿಜಯನಗರ ಜಿಲ್ಲೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Vijayanagar Zilla Panchayat Recruitment 2021 : Details of Vacancies
ಹುದ್ದೆ :
1) ಸಹಾಯಕ ಕಾರ್ಯಕ್ರಮ ಸಂಯೋಜನಾಧಿಕಾರಿ (ಎಡಿಪಿಸಿ) – 01 ಹುದ್ದೆ
ಬಿಇ/ಬಿ.ಟೆಕ್ ಅಥವಾ ಎಂಬಿಎ/ ಎಂ.ಎಸ್.ಡಬ್ಲ್ಯೂ ಸ್ನಾತಕೋತ್ತರ ಪದವಿ ಪಡೆದಿರಬೇಕು. ನರೇಗಾ ಅಥವಾ ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ 3 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿರಬೇಕು.
2) ಜಿಲ್ಲಾ ಐ.ಇ.ಸಿ. ಸಂಯೋಜಕರು – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 03 ವರ್ಷಗಳ ಕನಿಷ್ಠ ಸೇವಾನುಭವ ಹೊಂದಿರಬೇಕು.
3) ಜಿಲ್ಲಾ ಎಂ.ಐ.ಎಸ್. ಸಂಯೋಜಕರು – 01 ಹುದ್ದೆ
ಎಂಸಿಎ ಅಥವಾ ಬಿಇ ಇನ್ ಕಂಪ್ಯೂಟರ್/ ಇನ್ಫಾರ್ಮೆಶನ್ ಸೈನ್ಸ್. 03 ವರ್ಷಗಳ ಕನಿಷ್ಠ ಸೇವಾನುಭವ ಹೊಂದಿರಬೇಕು.
4) ಜಿಲ್ಲಾ ಅಕೌಂಟ್ ಮ್ಯಾನೇಜರ್ – 1 ಹುದ್ದೆ
ಎಂಕಾಂ / ಎಂಬಿಎ ಫೈನಾನ್ಸ್, ಆರ್ಟಿಕಲ್ಶಿಪ್ ಸರ್ಟಿಫಿಕೇಟ್, ಜಿ.ಎಸ್.ಟಿ ಫೈಲಿಂಗ್ ಸರ್ಟಿಫಿಕೇಟ್, ಟ್ಯಾಲಿ 9.0 ಜೊತೆಗೆ 2 ವರ್ಷಗಳ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಸೇವಾನುಭವ ಹೊಂದಿರಬೇಕು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರದಲ್ಲಿ ಕರ್ತವ್ಯ ನಿರ್ವಹಿಸಬೇಕು.
ವೇತನ ಹಾಗೂ ವಯೋಮಾನ : ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ವೇತನ ಹಾಗೂ ವಯೋಮಾನ ನಿಗದಿಪಡಿಸಲಾಗಿದೆ.
ಹುದ್ದೆ | ವೇತನ | ವಯೋಮಾನ |
ಸಹಾಯಕ ಕಾರ್ಯಕ್ರಮ ಸಂಯೋಜನಾಧಿಕಾರಿ | 38,000 + 2,000 | 25-40 ವರ್ಷ |
ಜಿಲ್ಲಾ ಐ.ಇ.ಸಿ ಸಂಯೋಜಕರು | 30,000 + 2,000 | 25-40 ವರ್ಷ |
ಜಿಲ್ಲಾ ಎಂ.ಐ.ಎಸ್ ಸಂಯೋಜಕರು | 30,000 + 2,000 | 25-40 ವರ್ಷ |
ಜಿಲ್ಲಾ ಅಕೌಂಟ್ ಮ್ಯಾನೇಜರ್ | 30,000 + 2,000 | 25-35 ವರ್ಷ |
ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಸದರಿ ಪಟ್ಟಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಸಂಬಂಧಪಟ್ಟ ಹುದ್ದೆಗೆ ಆಯ್ಕೆಗೆ ಪರಿಗಣಿಸಲಾಗುವುದು. ಸಂದರ್ಶನ ಇರುವುದಿಲ್ಲ.
ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ನೇರ ನೇಮಕಾತಿ
ವಿಜಯನಗರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 20, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 08, 2022
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಜಿ.ಪಂ ಕಾರ್ಯಾಲಯಕ್ಕೆ ಹಾಜರಾಗಬೇಕಾದ ದಿನಾಂಕ : ಜನವರಿ 12, 2022
Vijayanagar Zilla Panchayat Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.