Vijayapura DCC Bank Recruitment 2022 – Apply for 71 FDA, Peon and Various Posts

Vijayapura DCC Bank Recruitment 2022 : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Vijayapura DCC Bank Recruitment 2022 : Details of Vacancies

ಹುದ್ದೆ : ಹಿರಿಯ ವ್ಯವಸ್ಥಾಪಕರು, ಕಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಇಂಜಿನಿಯರ್, ಕ್ಷೇತ್ರಾಧಿಕಾರಿಗಳು, ಕೃಷಿ ಅಭಿವೃದ್ಧಿ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ಜವಾನ, ಸೆಕ್ಯೂರಿಟಿ ಗಾರ್ಡ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 71 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಹಿರಿಯ ವ್ಯವಸ್ಥಾಪಕರು345,300-88,300
ಕಿರಿಯ ವ್ಯವಸ್ಥಾಪಕರು543,100-83,900
ಕಂಪ್ಯೂಟರ್ ಇಂಜಿನಿಯರ್143,100-83,900
ಕ್ಷೇತ್ರಾಧಿಕಾರಿಗಳು1540,900-70,200
ಕೃಷಿ ಅಭಿವೃದ್ಧಿ ಅಧಿಕಾರಿ140,900-70,200
ಪ್ರಥಮ ದರ್ಜೆ ಸಹಾಯಕ2133,450-62,600
ಜವಾನ2323,500-47,650
ಸೆಕ್ಯೂರಿಟಿ ಗಾರ್ಡ್223,500-47,650

ಶೈಕ್ಷಣಿಕ ಅರ್ಹತೆ :
• ಹಿರಿಯ ವ್ಯವಸ್ಥಾಪಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 3 ವರ್ಷ ಬ್ಯಾಂಕಿನಲ್ಲಿ ವ್ಯವಸ್ಥಾಪಕ ದರ್ಜೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
• ಕಿರಿಯ ವ್ಯವಸ್ಥಾಪಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 3 ವರ್ಷ ಬ್ಯಾಂಕಿನಲ್ಲಿ ಕ್ಷೇತ್ರಾಧಿಕಾರಿ ದರ್ಜೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
• ಕಂಪ್ಯೂಟರ್ ಇಂಜಿನಿಯರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಬಿ.ಇ (ಕಂಪ್ಯೂಟರ್ ಸೈನ್ಸ್/ಇ ಮತ್ತು ಸಿ)/ಎಂ.ಸಿ.ಎ ಪದವಿ ಪಡೆದಿರಬೇಕು.
• ಕ್ಷೇತ್ರಾಧಿಕಾರಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ, ಕಂಪ್ಯೂಟರ್ ಪರಿಜ್ಞಾನ ಹಾಗೂ ಕನಿಷ್ಠ 2 ವರ್ಷ ಬ್ಯಾಂಕಿನಲ್ಲಿ ಗುಮಾಸ್ತರ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
• ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಬಿ.ಎಸ್ಸಿ (ಅಗ್ರಿ) ಪದವಿ ಪಡೆದಿರಬೇಕು.
• ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ್ ತರಬೇತಿ, ಸಹಕಾರ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಅರ್ಹತೆ ಮೇಲೆ ಆದ್ಯತೆ ನೀಡಲಾಗುವುದು.
• ಜವಾನ ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:20ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ 85ಕ್ಕೆ ಇಳಿಸಿ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಇದರೊಂದಿಗೆ ಕಂಪ್ಯೂಟರ್ ಇಂಜಿನಿಯರ ಹಾಗೂ ಕೃಷಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಪ್ರಾವಿಣ್ಯತೆ ಪರೀಕ್ಷೆ ನಡೆಸಲಾಗುವುದು. (ಜವಾನ/ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು)

ಉದ್ಯೋಗ ಮಾಹಿತಿ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ನೇಮಕಾತಿ 2022

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಸಂಚಾಲಕ ಸದಸ್ಯರು, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಸೋಲಾಪುರ ರಸ್ತೆ, ವಿಜಯಪುರ

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಸ್ವ ಹಸ್ತಾಕ್ಷರವಿರುವ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ವಯಸ್ಸು ದೃಢೀಕರಣ ಕುರಿತು ಎಸ್.ಎಸ್.ಎಲ್.ಸಿ ಅಂಕಪಟ್ಟಿ/ ವರ್ಗಾವಣೆ ಪ್ರಮಾಣ ಪತ್ರ, ವಿದ್ಯಾರ್ಹತೆ ಕುರಿತು ಪ್ರಮಾಣ ಪತ್ರ ಮತ್ತು ಪದವಿಯ ಎಲ್ಲಾ ವರ್ಗಗಳ ಅಂಕಪಟ್ಟಿ, ಪ.ಜಾತಿ, ಪ.ಪಂ., ಪ್ರ 1, ಹಿಂದುಳಿದ ವರ್ಗದ ಹಾಗೂ ಇನ್ನಿತರ ಮೀಸಲಾತಿ ಸೌಲಭ್ಯ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸರಕಾರ ನಿಗದಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದವರಿಂದ ದೃಢೀಕರಣ ಪಡೆದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 500 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಮಾಜಿ ಸೈನಿಕ ಅಭ್ಯರ್ಥಿಗಳು ರೂ. 250 ಪಾವತಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಬ್ಯಾಂಕಿನಿಂದ ಅರ್ಜಿ ಪಡೆಯಲು ಪ್ರಾರಂಭದ ದಿನಾಂಕ : ಫೆಬ್ರುವರಿ 15, 2022
ಬ್ಯಾಂಕಿನಿಂದ ಅರ್ಜಿ ಪಡೆಯಲು ಕೊನೆಯ ದಿನಾಂಕ : ಮಾರ್ಚ್ 02, 2022
ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 05, 2022

Vijayapura DCC Bank Recruitment 2022 : Important Links

ಅಧಿಸೂಚನೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Vijayapura DCC Bank Recruitment 2022 – Apply for 71 FDA, Peon and Various Posts”

Leave a Comment