Vijayapura Gram Panchayat Library Recruitment 2021 – Apply for Supervisor Post

Vijayapura Gram Panchayat Library Recruitment 2021 : ವಿಜಯಪುರ ಜಿಲ್ಲೆಯ ಬಂದಾಳ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Vijayapura Gram Panchayat Library Recruitment 2021 : Details of Vacancies

ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು

ಕರ್ತವ್ಯ ಸ್ಥಳ : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಂದಾಳ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ಹಾಲು ಒಕ್ಕೂಟದಲ್ಲಿ ನೇಮಕಾತಿ 2021

ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಛೇರಿ ಅಥವಾ ಉಪ ನಿರ್ದೇಶಕರವರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ವಿಜಯಪುರ ಇಲ್ಲಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ, ಅಂಗವಿಕಲತೆ (ಇದ್ದಲ್ಲಿ) ದೃಢೀಕರಣ ಪತ್ರ.

ಅರ್ಜಿ ಸಲ್ಲಿಸುವ ವಿಳಾಸ : ಉಪ ನಿರ್ದೇಶಕರವರ ಕಛೇರಿ,
ಜಿಲ್ಲಾ ಕೇಂದ್ರ ಗ್ರಂಥಾಲಯ, ನೆಹರು ಮಾರ್ಕೆಟ್, 1ನೇ ಮಹಡಿ, ವಿಜಯಪುರ-01

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇತರೆ ಮಾಹಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 27, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 24, 2022

Vijayapura Gram Panchayat Library Recruitment 2021 : Important Links

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಉಪನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ವಿಜಯಪುರ ಇವರನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment