VJNL Recruitment 2021 : ವಿಶ್ವೇಶ್ವರಯ್ಯ ಜಲ ನಿಗಮದ ನೋಂದಾಯಿತ ಕಛೇರಿ, ಬೆಂಗಳೂರು ಹಾಗೂ ಕೇಂದ್ರ ಕಛೇರಿ ಚಿತ್ರದುರ್ಗ ಕಛೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಿಸಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
VJNL Recruitment 2021 : Details of Vacancies
ಹುದ್ದೆ :
• ಡೆಪ್ಯೂಟಿ ಮ್ಯಾನೇಜರ್ : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಪದವಿ ಅರ್ಹತೆ ಜೊತೆಗೆ 5 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು
ವೇತನ : ರೂ. 52,650 ರಿಂದ ರೂ. 97,100
• ಸಿಸ್ಟಂ ಇಂಜಿನಿಯರ್ : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಬಿಇ ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ ಜೊತೆಗೆ 3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು
ವೇತನ : ರೂ. 43,100 ರಿಂದ ರೂ. 83,900
• ಸೀನಿಯರ್ ಅಕೌಂಟ್ಸ್ ಎಕ್ಸಿಕ್ಯೂಟಿವ್ : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಸಿಎ/ ಐಸಿಡಬ್ಲ್ಯೂಎ/ ಎಂಬಿಎ/ ಎಂಕಾಂ ಜೊತೆಗೆ 3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು
ವೇತನ : ರೂ. 36,000 ರಿಂದ ರೂ. 67,550
• ಅಸಿಸ್ಟೆಂಟ್ ಮ್ಯಾನೇಜರ್ (ಅಕೌಂಟ್ಸ್) : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಸಿಎ/ ಐಸಿಡಬ್ಲ್ಯೂಎ/ ಎಂಬಿಎ/ ಎಂಕಾಂ ಜೊತೆಗೆ 2-3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು
ವೇತನ : ರೂ. 43,100 ರಿಂದ ರೂ. 83,900
• ಅಕೌಂಟ್ಸ್ ಅಸಿಸ್ಟೆಂಟ್ : 04+01 ಹುದ್ದೆ
ಶೈಕ್ಷಣಿಕ ಅರ್ಹತೆ : ವಾಣಿಜ್ಯ ಪದವಿ ಜೊತೆಗೆ 2 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು
ವೇತನ : ರೂ. 27,650 ರಿಂದ ರೂ. 52,650
• ಆಫೀಸ್ ಅಸಿಸ್ಟೆಂಟ್ : 12 ಹುದ್ದೆ
ಶೈಕ್ಷಣಿಕ ಅರ್ಹತೆ : ಪದವಿ ಜೊತೆಗೆ 3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು
ವೇತನ : ರೂ. 27,650 ರಿಂದ ರೂ. 52,650
• ಪರ್ಸನಲ್ ಅಸಿಸ್ಟೆಂಟ್ : 05+01 ಹುದ್ದೆ
ಶೈಕ್ಷಣಿಕ ಅರ್ಹತೆ : ಡಿಪ್ಲೋಮಾ ಅರ್ಹತೆ ಜೊತೆಗೆ 2 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು
ವೇತನ : ರೂ. 27,650 ರಿಂದ ರೂ. 52,650
• ಡೇಟಾ ಎಂಟ್ರಿ ಆಪರೇಟರ್ : 08+02 ಹುದ್ದೆ
ಶೈಕ್ಷಣಿಕ ಅರ್ಹತೆ : ಪಿಯುಸಿ ಜೊತೆಗೆ ಕಂಪ್ಯೂಟರ್ ಜ್ಞಾನ ಇರಬೇಕು.
ವೇತನ : ರೂ. 21,400 ರಿಂದ ರೂ. 42,000
• ಟೆಲಿಪೋನ್ ಆಪರೇಟರ್ : 01 ಹುದ್ದೆ
ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ ಜೊತೆಗೆ ಕನ್ನಡ ಹಾಗೂ ಇಂಗ್ಲೀಷ್ ಮಾತನಾಡಲು ಬರಬೇಕು.
ವೇತನ : ರೂ. 21,400 ರಿಂದ ರೂ. 42,000
• ಡ್ರೈವರ್ : 11+01 ಹುದ್ದೆ
ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ ಜೊತೆಗೆ ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ವೇತನ : ರೂ. 21,400 ರಿಂದ ರೂ. 42,000
• ಅಟೆಂಡರ್ : 10+02 ಹುದ್ದೆ
ಶೈಕ್ಷಣಿಕ ಅರ್ಹತೆ : 10ನೇ ತರಗತಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ವೇತನ : ರೂ. 18,600 ರಿಂದ ರೂ. 32,600
• ಜವಾನರು : 05 ಹುದ್ದೆ
ಶೈಕ್ಷಣಿಕ ಅರ್ಹತೆ : 7ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವೇತನ : ರೂ. 17,000 ರಿಂದ ರೂ. 28,950
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 67 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾ/ಪ.ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ
ಉದ್ಯೋಗ ಮಾಹಿತಿ : ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗಾವಕಾಶ
ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ (ಡೆಪ್ಯೂಟಿ ಮ್ಯಾನೇಜರ್ ಹಾಗೂ ಸಿಸ್ಟಂ ಇಂಜಿನಿಯರ್ ಹೊರತುಪಡಿಸಿ) ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, Resume ಹಾಗೂ ಅರ್ಜಿ ಜೊತೆಗೆ “ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು – ಆರ್ಥಿಕ
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ, ನೆಲ ಮಹಡಿ, ಸಂ. 148, ಎಂಬೆಸ್ಸಿ ಚೌಕ, ಇನ್ ಪ್ಯಾಂಟ್ರಿ ರಸ್ತೆ, ಬೆಂಗಳೂರು – 560 001
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 06, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 22, 2021
VJNL Recruitment 2021 : Important Links
ಅಧಿಸೂಚನೆ : Click Here
ಅರ್ಜಿ ನಮೂನೆ: Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.