Water Resources Department Karnataka Recruitment 2022 – Apply Online for 155 SDA Backlog Posts

Water Resources Department Karnataka Recruitment 2022 : ಜಲ ಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ವೇತನ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Water Resources Department Karnataka Recruitment 2022 : Details of Vacancies

ಹುದ್ದೆ : ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆ (ಗ್ರೂಪ್-ಸಿ ವೃಂದ)

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 155 182 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಕರ್ತವ್ಯ ಸ್ಥಳ : ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ :
• ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆ.
• ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ
• ಮೂರು ವರ್ಷಗಳ ಡಿಪ್ಲೊಮಾ ಅಥವಾ ಎರಡು ವರ್ಷಗಳ ಐ.ಟಿ.ಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ ಅಭ್ಯರ್ಥಿಗಳು ಎನ್.ಐ.ಓ.ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇರ ನೇಮಕಾತಿ 2022

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ವಯೋಮಿತಿಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 26, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 25, 2022

Water Resources Department Karnataka Recruitment 2022 : Important Links

New Notification Click Here
Apply Online Click Here
ಮೂಲ ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment