WCD Karnataka Recruitment 2021 – 769 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

WCD Karnataka Recruitment 2021 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Karnataka Recruitment 2021 : Details of Vacancies

ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 769 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಜಿಲ್ಲೆಅಂಗನವಾಡಿ ಕಾರ್ಯಕರ್ತೆಅಂಗನವಾಡಿ ಸಹಾಯಕಿ
ಹಾವೇರಿ2370
ಕೊಡಗು2560
ಚಿಕ್ಕಮಗಳೂರು2760
ಬಾಗಲಕೋಟೆ40106
ತುಮಕೂರು73285

ಕರ್ತವ್ಯ ಸ್ಥಳ : ಅಭ್ಯರ್ಥಿಗಳು ಹಾವೇರಿ, ಕೊಡಗು, ಚಿಕ್ಕಮಗಳೂರು, ಬಾಗಲಕೋಟೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ತೇರ್ಗಡೆಯಾಗಿರಬೇಕು. ಎಸ್.ಎಸ್.ಎಲ್.ಸಿ ಗಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಆಯ್ಕೆಗೆ ಪರಿಗಣಿಸುವುದಿಲ್ಲ.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆ, ಗರಿಷ್ಠ 9ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನೇಮಕಾತಿ

ವಯೋಮಾನ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ಹೊಂದಿರಬೇಕು.

ವಯೋಮಿತಿ ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 22, 2021
(ಹಾವೇರಿ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 23, 2021
(ಕೊಡಗು) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2021
(ಚಿಕ್ಕಮಗಳೂರು) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 06, 2021
(ಬಾಗಲಕೋಟೆ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 03, 2021
(ತುಮಕೂರು) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 04, 2021

WCD Karnataka Recruitment 2021 : Important Links

(ಹಾವೇರಿ) ಅಧಿಸೂಚನೆ : Click Here
(ಕೊಡಗು) ಅಧಿಸೂಚನೆ : Click Here
(ಚಿಕ್ಕಮಗಳೂರು) ಅಧಿಸೂಚನೆ : Click Here
(ಬಾಗಲಕೋಟೆ) ಅಧಿಸೂಚನೆ : Click Here
(ತುಮಕೂರು) ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಇತರೆ ಮಾಹಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ಥಳೀಯ ನಿವಾಸಿಗಳಾಗಿರಬೇಕು

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook